ನವದೆಹಲಿ:CBSE EXAM 2021: ಕೊರೊನಾ ವೈರಸ್ ಹಿನ್ನೆಲೆ ಪರೀಕ್ಷೆಗಳನ್ನು ನಡೆಸಲಾಗುವ ವಿಧಾನದಲ್ಲಿ ಭಾರಿ ಬದಲಾವಣೆಗಳು ಕಂಡುಬರಲಿವೆ. ಏತನ್ಮಧ್ಯೆ ಸಿಬಿಎಸ್ಇ (CBSE)ಮಂಡಳಿ ಶೀಘ್ರದಲ್ಲಿಯೇ 10ನೇ ಮತ್ತು 12ನೇ ಪರೀಕ್ಷೆಗಳಿಗಾಗಿ SOP ಜಾರಿಗೊಳಿಸುವ ಸಾಧ್ಯತೆ ಇದೆ.
ಮುಂದಿನ ವರ್ಷ ನಡೆಯಲಿರುವ ಬೋರ್ಡ್ ಪರೀಕ್ಷೆಗಳಲ್ಲಿ ಕೊರೊನಾವೈರಸ್ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುವುದು. ಇದಕ್ಕೂ ಮೊದಲು ಈ ಬಾರಿ ಬೋರ್ಡ್ ಪರೀಕ್ಷೆಯನ್ನು ಆನ್ಲೈನ್ನಲ್ಲಿ ನಡೆಸಲಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಲಿಖಿತವಾಗಿ ನಡೆಸಲಾಗುವುದು ಎಂದು ಸಿಬಿಎಸ್ಇ ಈಗಾಗಲೇ ಸ್ಪಷ್ಟಪಡಿಸಿದೆ.
ಇದನ್ನು ಓದಿ- CBSE ಬೋರ್ಡ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಲು ಇದು ಬೆಸ್ಟ್ ಟ್ರಿಕ್
ಪರೀಕ್ಷಾ ಕೇಂದ್ರಗಳ ಸಂಖ್ಯೆಯಲ್ಲಿ ಹೆಚ್ಚಳ
ಕೊರೊನಾ ವೈರಸ್ ಹಿನ್ನೆಲೆ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಕೊರೊನಾ ಸೋಂಕಿನಿಂದ ಪಾರಾಗಲು ವೈಯಕ್ತಿಕ ಅಂತರ ಕಾಯುವುದು ಅನಿವಾರ್ಯವಾಗಿದೆ. ಹೀಗಾಗಿ ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳ ಸಂಖ್ಯೆ ಮೊದಲಿಗಿಂತಲೂ ಕಡಿಮೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ- CBSE 12th Practical Exam Date: ಸಿಬಿಎಸ್ಇ 12ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಯ ದಿನಾಂಕ ಘೋಷಣೆ
ಒಂದು ಕೊಠಡಿಯಲ್ಲಿ 12 ಅಭ್ಯರ್ಥಿಗಳು
ಮಾಧ್ಯಮದಲ್ಲಿ ಪ್ರಕಟಗೊಂಡ ವರದಿಯೊಂದರ ಪ್ರಕಾರ ಕೊರೊನಾ ಸೋಂಕಿನ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮಂಡಳಿಯ ಲಖನೌ ಸಂಯೋಜಕ ಜಾವೇದ್ ಆಲಂ ಖಾನ್ ಹೇಳಿದ್ದಾರೆ. ಹೀಗಾಗಿ ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳನ್ನು ನೋಡಬಹುದು ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಕೊಠಡಿ ದೊಡ್ಡದಾಗಿದ್ದರೆ, 12-12 ರ ಅನುಪಾತದಲ್ಲಿ ವಿದ್ಯಾರ್ಥಿಗಳನ್ನು ಕೂರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ-CBSE ಬೋರ್ಡ್ ಪರೀಕ್ಷೆಯ ಪಠ್ಯ ಕಡಿಮೆಯಾಗುವ ನಿರೀಕ್ಷೆ, ಪರೀಕ್ಷೆಗಳು ಯಾವಾಗ ಇಲ್ಲಿದೆ ಮಾಹಿತಿ
ಶೀಘ್ರವೇ ಜಾರಿಯಾಗಲಿದೆ ಡೇಟ್ ಶೀಟ್
CBSE ಇದುವರೆಗೆ ಬೋರ್ಡ್ ಎಕ್ಸಾಮ್ 2021ರ ಡೇಟ್ ಶೀಟ್ ಜಾರಿಗೊಳಿಸಿಲ್ಲ. ಲಿಖಿತ ಪರೀಕ್ಷೆಯ ಮೊದಲು ಪ್ರ್ಯಾಕ್ಟಿಕಲ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಈ ಮೊದಲೇ ಹೇಳಿಕೆ ನೀಡಿರುವ ಸಿಬಿಎಸ್ಇ ಮಂಡಳಿ (CBSE) ಕಾರ್ಯದರ್ಶಿ ಅನುರಾಗ್ ತ್ರಿಪಾಠಿ, ಪ್ರ್ಯಾಕ್ಟಿಕಲ್ ಪರೀಕ್ಷೆಗಳನ್ನು ಜನವರಿ 1 ರಿಂದ ಫೆಬ್ರುವರಿ 8ರ ಮಧ್ಯೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ಶೀಘ್ರದಲ್ಲಿಯೇ ವೇಳಾಪಟ್ಟಿ ಹಾಗೂ SOPಗಳನ್ನು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.