ಬೆಂಗಳೂರು: ಹೋರಾಟ ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು ಹಾಗೂ ಬೆಂಬಲಿಗರ ವಿರುದ್ಧ ದಾಖಲಾದ ಗಂಭೀರ ಸ್ವರೂಪದ ಪ್ರಕರಣಗಳನ್ನು ವಾಪಾಸು ಪಡೆಯಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 31ರಂದು ಆದೇಶ ಹೊರಡಿಸಿದ್ದ ಸರ್ಕಾರ, 62 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದಿತ್ತು.
ವೈಯಕ್ತಿಕ ಪ್ರಕರಣಗಳು ಹಾಗೂ ಗಂಭೀರ ಸ್ವರೂಪದ ಮೊಕದ್ದಮೆಗಳನ್ನು ರದ್ದು ಮಾಡಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡುವ ಮೂಲಕ, ತನ್ನ ಆದೇಶವನ್ನು ಸಮರ್ಥಿಸಿಕೊಂಡಿತ್ತು. ಇದರಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ, ರೇಣುಕಾಚಾರ್ಯ ಅವರ ಬೆಂಬಲಿಗರ ಕೇಸ್, ಸಚಿವ ಬಿ.ಸಿ.ಪಾಟೀಲ್(B.C.Patil) ಸೇರಿದಂತೆ ಅನೇಕ ನಾಯಕರು ಹಾಗೂ ಅವರ ಬೆಂಬಲಿಗರ ಕೇಸ್ಗಳು ಸೇರಿದ್ದವು.
ಬಿಜೆಪಿ ಜತೆ ಜೆಡಿಎಸ್ ವಿಲೀನ ಸಾಧ್ಯವೇ ಇಲ್ಲ : ಕುಮಾರಸ್ವಾಮಿ ಸ್ಪಷ್ಟನೆ
ಸರ್ಕಾರದ ಈ ನಿರ್ಧಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾಗಲೇ ಡಿಜಿ, ಐಜಿಪಿ ಕಚೇರಿ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಕಾನೂನು ಇಲಾಖೆಗಳು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಅಷ್ಟೇ ಅಲ್ಲದೇ ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಘಟನೆ ಸರ್ಕಾರದ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು.
ದುಬಾರಿ ಶುಲ್ಕ ಪಾವತಿ ಬಗ್ಗೆ ಫೇಸ್ಬುಕ್ನಲ್ಲಿ ಅಳಲು ತೋಡಿಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್
ಇಂದು ಇದರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ನೇತೃತ್ವದ ಪೀಠವು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಆಗಸ್ಟ್ 31ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಮುಂದಿನ ಯಾವುದೇ ಪ್ರಕ್ರಿಯೆ ನಡೆಸದಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.
BJP: 'ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ'
2017ರಂದು ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಪ್ರಯುಕ್ತ ಮೈಸೂರು ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ 114 ನಿಷೇಧಾಜ್ಞೆ ಇದ್ದರೂ ಮೆರವಣಿಗೆ ನಡೆಸಲಾಗಿತ್ತು. ಈ ವೇಳೆ ಪ್ರತಾಪ್ ಸಿಂಹ ಬ್ಯಾರಿಕೇಡ್ ಮೇಲೆ ಕಾರನ್ನು ವೇಗವಾಗಿ ನುಗ್ಗಿಸಿದ ಆರೋಪಕ್ಕೊಳಗಾಗಿದ್ದರು. ಆದ್ದರಿಂದ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
'SSLC, PUC ವಿದ್ಯಾರ್ಥಿಗಳಿಗೆ 'ಗುಡ್ ನ್ಯೂಸ್' ನೀಡಿದ ಸಚಿವ ಸುರೇಶ್ ಕುಮಾರ್!
ಅದರಂತೆ, ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಬಿಜೆಪಿ ಬೆಂಬಲಿಗರು ಹೊನ್ನಾಳಿ ಪಟ್ಟಣದಲ್ಲಿ ಜೈಕಾರ ಹಾಕುತ್ತಾ ಗುಂಪು ಕಟ್ಟಿಕೊಂಡಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಜತೆ ಜಗಳವಾಗಿತ್ತು. ಆಗ ರೇಣುಕಾಚಾರ್ಯ ಬೆಂಬಲಿಗರು, ಅಲ್ಲಿ ಜಗಳವಾಡಿ ಇಬ್ಬರಿಗೆ ಚಾಕು ಇರಿದಿರುವ ಆರೋಪವಿದೆ.ಈ ಪ್ರಕರಣಗಳೂ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಕೈಬಿಡಲು ಯಡಿಯೂರಪ್ಪ ಸರ್ಕಾರ ನಿರ್ಧರಿಸಿತ್ತು.