ಮೈಸೂರು : ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (Siddaramaiah) ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದಾರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ (Astrology) ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ (ST Somashekar) ಹೇಳಿದರು.
ಸಿದ್ದರಾಮಯ್ಯ (Siddaramaiah) ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು ನೋಡಿಕೊಳ್ಳಲಿ. ನಮ್ಮ ಪಕ್ಷದ ಉಸಾಬರಿ ಏಕೆ? ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು; ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ :
ಅವರು ಪದೇ ಪದೇ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ತಮ್ಮ ಪಕ್ಷದಲ್ಲಿನ ಗೊಂದಲಗಳನ್ನು ಬಗೆಹರಿಸಿಕೊಳ್ಳಲಿ. ಪ್ರಚಾರಕ್ಕಾಗಿ ಅವರು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ಕೋವಿಡ್ 19 (Covid 19) ಹಾಗೂ ಉಳಿದ ಪರಿಸ್ಥಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ (Amit Shah) ಅವರೇ ಹೇಳಿದ್ದಾರೆ. ಯಡಿಯೂರಪ್ಪ ಇನ್ನು ಎರಡೂವರೆ ವರ್ಷ ಆಡಳಿತ ನಡೆಸುತ್ತಾರೆ. ಉತ್ತಮ ಮತ್ತು ದಕ್ಷ ಆಡಳಿತ ನೀಡುತ್ತಿದ್ದಾರೆ ಎಂದೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಮಗೆ ಶಾ ಅವರ ಸರ್ಟಿಫಿಕೇಟ್ ಸಾಕು. ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ. ಅದನ್ನು ಅವರೇ ಇಟ್ಟುಕೊಳ್ಳಲಿ ಎಂದು ಸಚಿವರು ಹೇಳಿದರು.
ಇದನ್ನೂ ಓದಿ : ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ: ಸಚಿವ ಎಸ್.ಟಿ. ಸೋಮಶೇಖರ್
ಬೆಂಗಳೂರು ಅಭಿವೃದ್ಧಿ ಸಿಡಿ ಮಾತ್ರ ಗೊತ್ತು; ಸಚಿವರಾದ ಸೋಮಶೇಖರ್ :
ನನಗೆ ಯಾವುದೇ ಸಿಡಿ ಬಗ್ಗೆ ಮಾಹಿತಿ ಇಲ್ಲ. ನನಗೆ ಗೊತ್ತಿರುವುದು ಬೆಂಗಳೂರು (Banglore) ಅಭಿವೃದ್ಧಿಯ ಸಿಡಿ. ಮುಖ್ಯಮಂತ್ರಿಗಳು ಈಗಾಗಲೇ 2 ಸಭೆ ನಡೆಸಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ. ಅದಕ್ಕೊಂದು ರೂಪುರೇಷೆ ನೀಡಿ ಸಂಬಂಧಿಸಿದ ಸಿಡಿಯನ್ನು ನಮಗೆ ಕಳುಹಿಸುವುದಾಗಿ ಹೇಳಿದ್ದಾರೆ. ಅದು ಬಿಟ್ಟು ಬೇರೆ ಮಾಹಿತಿ ನನಗೆ ಇಲ್ಲ. ಅದನ್ನು ಹೇಳಿದವರಿಗೇ ಕೇಳಬೇಕು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ "ಡಬಲ್ ಇಂಜಿನ್" (Double Engine) ಅಭಿವೃದ್ಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವರಾದ ಸೋಮಶೇಖರ್ ಅವರು, ರಾಜ್ಯದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದ್ದಲ್ಲದೆ, ವೇಗ ಪಡೆದುಕೊಂಡಿದೆ. ಕೋವಿಡ್ ಹಿನ್ನೆಲೆಯಲ್ಲಿ 8-9 ತಿಂಗಳು ಎಲ್ಲ ಕಡೆಯೂ ಅಭಿವೃದ್ಧಿ ಕುಂಠಿತಗೊಂಡಿತ್ತು. ಆದರೆ, ಈಗ ಎಲ್ಲವೂ ಪ್ರಾರಂಭವಾಗಿದೆ. ಒಂದೊಂದು ಕ್ಷೇತ್ರಕ್ಕೆ ಲೋಕೋಪಯೋಗಿಯಿಂದ ಸುಮಾರು 25 ಕೋಟಿ ರೂಪಾಯಿಯಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ಹೀಗೆ ಒಂದೊಂದಾಗಿ ಚಾಲನೆ ನೀಡಲಾಗುತ್ತಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ : ಜೇನುತುಪ್ಪಕ್ಕೆ ಆಯುರ್ವೇದ ಔಷಧ ಶಕ್ತಿ ಇದೆ; ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ
ಕಾಂಗ್ರೆಸ್ ನಲ್ಲಿದ್ದಾಗ ಎಸ್ ಬಿಎಂ; ಈಗ ಬಿಜೆಪಿ ಸೋಮಶೇಖರ್
ನಾವು ಕಾಂಗ್ರೆಸ್ (Congress) ಪಕ್ಷದಲ್ಲಿದ್ದಾಗ ಎಸ್ ಬಿಎಂ (SBM) ಆಗಿದ್ದೆವು. ಈಗ ಬಿಜೆಪಿ (BJP) ಸೇರಿದ್ದೇವೆ. ಈಗೇನಿದ್ದರೂ ನಾನು ಬಿಜೆಪಿ ಸೋಮಶೇಖರ್ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - https://bit.ly/3hDyh4G Apple Link - https://apple.co/3loQYe ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.