ಬೆಂಗಳೂರು: ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವಂತ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಉದ್ದೇಶದಿಂದ ತಾಲೂಕು ಪಂಚಾಯಿತಿಗಳನ್ನು ರದ್ದುಗೊಳಿಸಿ, ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ವೆಂಕಟರಾವ್ ನಾಡಗೌಡ ಪ್ರಶ್ನೆಗೆ ಉತ್ತರಿಸಿದಂತ ಅವರು, ಕೇಂದ್ರ ಕಾನೂನಿನ ಮೂಲಕ ರಾಜ್ಯದಲ್ಲಿ ಮೂರು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿಯಲ್ಲಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ(Taluk Panchayat) ಹಾಗೂ ಗ್ರಾಮ ಪಂಚಾಯಿತಿಗಳ ಪೈಕಿ ತಾಲೂಕು ಪಂಚಾಯಿತಿ ಬೇಕಿಲ್ಲ. ಹೀಗಾಗಿ ರಾಜ್ಯದಲ್ಲಿ ತಾಲೂಕು ಪಂಚಾಯಿತಿಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ಹೇಳಿದ್ದಾರೆ.
D.K.Shivakumar: ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳ ನಡೆವೇ ಸಿಎಂ ಬಿಎಸ್ ವೈ ಭೇಟಿಯಾದ ಡಿಕೆಶಿ..!
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ತಾಲೂಕು ಪಂಚಾಯಿತಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ 3 ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಎರಡು ಹಂತಗಳ ಪಂಚಾಯಿತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬ ಭಾವನೆ ಬಹುತೇಕರಲ್ಲಿದೆ. ಗಮನಾರ್ಹ ಅಂಶವೆಂದ್ರೇ, ಈ ಬಾರಿ ಬಹುತೇಕರು ತಾಲೂಕು ಪಂಚಾಯಿತಿಯಲ್ಲಿ ಏನೂ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದರು.
Vinay Guruji: ಬೆಳ್ಳಗ್ಗೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಭೇಟಿಯಾದ ವಿನಯ್ ಗುರೂಜಿ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.