Farmers Protest: ರೈತರಿಂದ ಫೆ.25ರಂದು ವಿಧಾನಸೌಧ ಚಲೋ ಚಳವಳಿ..!

ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆಯಬೇಕು, ಬಗರ್‍ಹುಕುಂ ಸಾಗುವಳಿ ಚೀಟಿ ನೀಡಬೇಕು, ರೈತರಿಗೆ ಪೋಡಿ ಮಾಡಿಕೊಡಬೇಕು, ಸರ್ಕಾರಿ ಕಚೇರಿಗಳಲ್ಲಿ ರೈತರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಬೇಕು

Last Updated : Feb 22, 2021, 10:45 PM IST
  • ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆ.25 ರಂದು ವಿಧಾನಸೌಧ ಚಲೋ ಚಳವಳಿ
  • ಫೆ.24ರಂದು ಮಧ್ಯಾಹ್ನ 4 ಗಂಟೆಗೆ ಮಾಗಡಿಯಿಂದ ಪಾದಯಾತ್ರೆ ಹೊರಟು ತಾವರೆಕೆರೆಯಲ್ಲಿ ವಾಸ್ತವ್ಯ ಹೂಡಲಾಗುವುದು
  • ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆಯಬೇಕು, ಬಗರ್‍ಹುಕುಂ ಸಾಗುವಳಿ ಚೀಟಿ ನೀಡಬೇಕು, ರೈತರಿಗೆ ಪೋಡಿ ಮಾಡಿಕೊಡಬೇಕು, ಸರ್ಕಾರಿ ಕಚೇರಿಗಳಲ್ಲಿ ರೈತರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಬೇಕು
Farmers Protest: ರೈತರಿಂದ ಫೆ.25ರಂದು ವಿಧಾನಸೌಧ ಚಲೋ ಚಳವಳಿ..! title=

ಬೆಂಗಳೂರು: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆ.25 ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುದ್ದೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.24ರಂದು ಮಧ್ಯಾಹ್ನ 4 ಗಂಟೆಗೆ ಮಾಗಡಿಯಿಂದ ಪಾದಯಾತ್ರೆ ಹೊರಟು ತಾವರೆಕೆರೆಯಲ್ಲಿ ವಾಸ್ತವ್ಯ ಹೂಡಲಾಗುವುದು ಎಂದರು.

ಫೆ.25ರಂದು ಬೆಳಗ್ಗೆ 9 ಗಂಟೆಗೆ ಪಾದಯಾತ್ರೆ ಮೂಲಕ ಫ್ರೀಡಂ ಪಾರ್ಕ್ ತಲುಪಿ ನಂತರ ರೈತರ ನಡಿಗೆ ವಿಧಾನಸೌಧ(Vidhan Soudha)ದ ಕಡೆಗೆ ಹೊರಟು ನಮ್ಮ ಬೇಡಿಕೆಗಳನ್ನು ಬಗೆಹರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ರೈತರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದು ಮತ್ತು ಡಿ.23ರಂದು ರೈತರ ದಿನಾಚರಣೆಯನ್ನು ವಿಧಾನಸೌದದ ಬ್ಯಾಂಕ್ವೆಟ್ ಹಾಲ್ ಮತ್ತು ಸರ್ಕಾರಿ ಕಚೇರಿಗಳಲ್ಲಿ ಆಚರಿಸಬೇಕು ಎಂದು ಒತ್ತಾಯಿಸಿದರು.

ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರಿಗೆ 'ಸರ್ಕಾರದಿಂದ ಪರಿಹಾರ ಧನಕ್ಕೆ ಅರ್ಜಿ'..!

ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆಯಬೇಕು, ಬಗರ್‍ಹುಕುಂ ಸಾಗುವಳಿ ಚೀಟಿ ನೀಡಬೇಕು, ರೈತ(Farmers)ರಿಗೆ ಪೋಡಿ ಮಾಡಿಕೊಡಬೇಕು, ಸರ್ಕಾರಿ ಕಚೇರಿಗಳಲ್ಲಿ ರೈತರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಬೇಕು ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಇದೇ ವೇಳೆ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಲೋಕೇಶ್, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಕಾರ್ಯದರ್ಶಿ ಅರ್ಜುನ್ ಮತ್ತಿತರಿದ್ದರು.

Basavaraj Bommai: ಪಂಚಮಸಾಲಿ ಮೀಸಲಾತಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಬೊಮ್ಮಾಯಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News