Sanjeev Kumar: ಬೈಎಲೆಕ್ಷನ್ ಬಗ್ಗೆ 'ಮಹತ್ವದ ಮಾಹಿತಿ' ನೀಡಿದ ಮುಖ್ಯ ಚುನಾವಣಾಧಿಕಾರಿ!

ರಾಜ್ಯದ ಒಂದು ಲೋಕಸಭೆ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಮುಂದಿನ ವಾರ ವೇಳಾ ಪಟ್ಟಿ ಪ್ರಕಟ

Last Updated : Feb 27, 2021, 06:16 PM IST
  • ರಾಜ್ಯದ ಒಂದು ಲೋಕಸಭೆ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಮುಂದಿನ ವಾರ ವೇಳಾ ಪಟ್ಟಿ ಪ್ರಕಟ
  • ಚುನಾವಣಾ ಆಯೋಗದ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್
  • ಕರ್ನಾಟಕದಲ್ಲಿ ಖಾಲಿಯಾಗಿರುವ ಬೆಳಗಾವಿ ಲೋಕಸಭೆ, ಸಿಂದಗಿ, ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ
Sanjeev Kumar: ಬೈಎಲೆಕ್ಷನ್ ಬಗ್ಗೆ 'ಮಹತ್ವದ ಮಾಹಿತಿ' ನೀಡಿದ ಮುಖ್ಯ ಚುನಾವಣಾಧಿಕಾರಿ! title=

ಬೆಂಗಳೂರು: ರಾಜ್ಯದ ಒಂದು ಲೋಕಸಭೆ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಮುಂದಿನ ವಾರ ವೇಳಾ ಪಟ್ಟಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗದ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್(Sanjeev Kumar) ತಿಳಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗ ನಿನ್ನೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಆಯಾ ರಾಜ್ಯಗಳಲ್ಲಿ ತೆರವಾಗಿರುವ ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿತ್ತು.

ಕರ್ನಾಟಕದಲ್ಲಿ ಖಾಲಿಯಾಗಿರುವ ಬೆಳಗಾವಿ ಲೋಕಸಭೆ, ಸಿಂದಗಿ, ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ನಿನ್ನೆಯೇ ವೇಳಾ ಪಟ್ಟಿ ಪ್ರಕಟವಾಗಲಿದೆ ಎಂಬ ನಿರೀಕ್ಷೆಗಳಿದ್ದವು. ಆದರೆ ಈ ಮೂರು ಕ್ಷೇತ್ರಗಳ ಚುನಾವಣೆಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ(Sunil Arora) ಹೇಳಿದ್ದರು.

HC Mahadevappa: ಸಿದ್ದರಾಮಯ್ಯ ವಿರುದ್ಧವೇ ಸಿಡಿದೆದ್ದ ಕಾಂಗ್ರೆಸ್ ಶಾಸಕ..!

ರಾಜ್ಯದ ಉಪಚುನಾವಣೆ(Byelection)ಗೆ ವೇಳಾ ಪಟ್ಟಿ ಪ್ರಕಟವಾಗಲಿದೆ ಎಂದು ಚಾತಕಪಕ್ಷಿಗಳಂತೆ ಕಾದು ಕುಳಿತಿದ್ದವರಿಗೆ ನಿರಾಸೆಯಾಗಿತ್ತು. ಉಪಚುನಾವಣೆಗಳ ವೇಳಾ ಪಟ್ಟಿ ಕುರಿತಂತೆ ಈ ಸಂಜೆಗೆ ಮಾಹಿತಿ ನೀಡಿರುವ ರಾಜ್ಯ ಚುನಾವಣಾ ಆಯೋಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್ ಅವರು, ಮುಂದಿನ ವಾರ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

BS Yediyurappa: ಹುಟ್ಟುಹಬ್ಬದ ದಿನ ರಾಜಹುಲಿ ಮನೆ ಮುಂದೆ ನಿಂತ ಘರ್ಜಿಸುವ ಸಿಂಹ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News