ಬೆಂಗಳೂರು: ಎಲ್ಲೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಈಗ ಮತ್ತೊಮ್ಮೆ ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ ಎನ್ನುವ ಸುಳ್ಳು ವದಂತಿಯ ಅಧಿಸೂಚನೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ವೈರಲ್ ಆಗಿರುವ ಫೇಕ್ ಅಧಿಸೂಚನೆ :
ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಸರ್ಕಾರದ ಅಧಿಸೂಚನೆ ಕುರಿತಾಗಿ ಫ್ಯಾಕ್ಟ್ ಚೆಕ್ ಮಾಡಿದಾಗ ಇದು ಹಳೆಯ ಅಧಿಸೂಚನೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ.ಸರ್ಕಾರದ ಮೂಲ ಅಧಿಸೂಚನೆಯ ದಿನಾಂಕವನ್ನು ತಿದ್ದುಪಡಿ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.
ಸರ್ಕಾರದ ಮೂಲ ಅಧಿಸೂಚನೆ:
ಈಗ ಹಲವಾರು ವಿವಿಗಳ ಪದವಿ ಪರೀಕ್ಷೆಗಳ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಏಕಾಏಕಿ 15 ದಿನಗಳ ಕಾಲ ರಜೆ ಘೋಷಣೆಯ ಅಧಿಸೂಚನೆ ಪತ್ರ ಹಲವು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯ ಸರ್ಕಾರವು ಅಂತಹ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಅಂತಹ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.