ಬೆಂಗಳೂರು : ಇನ್ನೇನು ಕರೋನಾವೈರಸ್ ಎಂಬ ಮಹಾಮಾರಿಯ ಕಾಟ ಮುಗಿಯಿತು ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೆ ತಲ್ಲಣ ಸೃಷ್ಟಿಸಿರುವ ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr. K. Sudhakar) ಹೇಳಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧ ಗುರುವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr. K. Sudhakar), ಈ ಸಮಯದಲ್ಲಿ ಲಸಿಕೆ ಮುಖ್ಯ. ಕೆಲ ದಿನಗಳ ಹಿಂದೆ ಒಂದೇ ದಿನ ಎರಡೂವರೆ ಲಕ್ಷ ಲಸಿಕೆ ನೀಡಲಾಗಿದೆ. ಪ್ರತಿ ದಿನ ಮೂರು ಲಕ್ಷ ಮಂದಿಗೆ ಕೋವಿಡ್ ಲಸಿಕೆ (Covid Vaccine) ನೀಡುವ ಗುರಿ ನಿಗದಿಪಡಿಸಲಾಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, 45 ವರ್ಷ ಮೇಲ್ಪಟ್ಟು ಅಸ್ವಸ್ಥತೆ ಹೊಂದಿರುವವರಿಗೆ ಲಸಿಕೆ ಹಾಕಿಸುವ ಮೂಲಕ ನಾವು ಈ ಮೂಲಕ ಕೋವಿಡ್ 2ನೇ ಅಲೆಯನ್ನು ತಡೆಯಬೇಕು ಎಂದು ಕರೆ ನೀಡಿದ್ದಾರೆ.
ಇದನ್ನೂ ಓದಿ - Corona Vaccine:'ರಾಜ್ಯದಲ್ಲಿ ಮನೆ ಬಾಗಿಲಿಗೆ ಬರಲಿದೆ ಕೊರೋನಾ ಲಸಿಕೆ'
ಕೋವಿಡ್ 2ನೇ ಅಲೆಯ ವೇಳೆ ರೋಗಿಗಳ ಸಂಖ್ಯೆ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ವ್ಯವಸ್ಥೆ ಬೇಕಾಗುತ್ತದೆ. ಯಾವುದೇ ಸಂಸ್ಥೆಯಲ್ಲಿ ಲೋಪ ಕಂಡುಬಂದರೆ ಆಯಾ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು. ಈ ಹಿನ್ನಲೆಯಲ್ಲಿ ಶೀಘ್ರದಲ್ಲೇ ಖಾಸಗಿ ಆಸ್ಪತ್ರೆಗಳ (Private Hospitals) ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುವುದು ಎಂದರು. ಇದರ ಜೊತೆಗೆ ಎಲ್ಲ ಮಾಹಿತಿ ತಕ್ಷಣ ದೊರೆಯಲು ರಿಯಲ್ ಟೈಮ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿವರಿಸಿದ ಆರೋಗ್ಯ ಸಚಿವರು ತಾತ್ಕಾಲಿಕವಾಗಿ ಗೃಹ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಯ ನೇಮಕವನ್ನು ಮಾಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 1,000 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ನಿರ್ಮಿಸಿದ್ದು, ಸೋಮವಾರದಿಂದ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ - ಮಾರ್ಚ್ 21ರಿಂದ 28ರವರೆಗೆ ಮೆಟ್ರೋ ಸಂಚಾರ ಬಂದ್..!
ಆಂಬ್ಯುಲೆನ್ಸ್ ಕೊರತೆ ಆಗಬಾರದೆಂದು ಸಿಲಿಕಾನ್ ಸಿಟಿಯಲ್ಲಿ 200 ಆಂಬ್ಯುಲೆನ್ಸ್ ನಿಯೋಜನೆ:
ಆಂಬ್ಯುಲೆನ್ಸ್ ಕೊರತೆ ಆಗಬಾರದೆಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 200 ಆಂಬ್ಯುಲೆನ್ಸ್ ನಿಯೋಜಿಸಲಾಗಿದೆ. ಮೊದಲ ಬಾರಿ ಕೊರೊನಾ ಬಂದಾಗ ಸರಿಯಾದ ಮಾಹಿತಿ, ಜ್ಞಾನ ಇರಲಿಲ್ಲ. ಅದನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ. ಎರಡನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ನಮ್ಮ ಬಳಿ ಲಸಿಕೆಯೂ ಇದೆ. ಹಾಗಾಗಿ ಹೆಚ್ಚು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ತಪ್ಪದೇ ಸುರಕ್ಷತಾ ಕ್ರಮ ಪಾಲಿಸಬೇಕು ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.