ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಅಗತ್ಯ -ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

    

Last Updated : Mar 18, 2018, 07:18 PM IST
ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಅಗತ್ಯ -ಉಪರಾಷ್ಟ್ರಪತಿ ವೆಂಕಯ್ಯನಾಯ್ಡು  title=

ಹೈದರಾಬಾದ್ : ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿ ಆಡಳಿತ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ, ಆದ್ದರಿಂದ ಅವುಗಳನ್ನು ಎಲ್ಲ ರಾಜ್ಯಗಳು ಬಲಪಡಿಸಬೇಕೆಂದು ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅಭಿಪ್ರಾಯಪಟ್ಟರು.

ಹೈದರಾಬಾದ ನಲ್ಲಿ ಉತ್ತಮ ಆಡಳಿತದ ಕುರಿತಾಗಿ ನಡೆದ ರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಬಂದು 70 ವರ್ಷಗಳ ಬಳಿಕವೂ ಆಡಳಿತದಲ್ಲಿ ಅಂತಹ ತೀವ್ರವಾದ ಬದಲಾವಣೆಯಾಗಿಲ್ಲ, ಇಂದಿಗೂ ಕೂಡ ಪ್ರಾಥಮಿಕ ಆರೋಗ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮೀಣ ರಸ್ತೆಗಳು, ವಿದ್ಯುತ್ ಮತ್ತು ವಸತಿಗಳಲ್ಲಿನ ಸೇವೆಯ ವಿತರಣೆಯು ಕಳಪೆಯಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು. 

ಆದ್ದರಿಂದ ಸಂಸತ್ತು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

Trending News