19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ - ಸಿದ್ದರಾಮಯ್ಯ ಎಚ್ಚರಿಕೆ

'ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ (BJP)  ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ'. 

Written by - Ranjitha R K | Last Updated : Mar 22, 2021, 12:35 PM IST
  • ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
  • ಟ್ವೀಟ್ ಮೂಲಕ ತಿರುಗೇಟು ನೀಡಿದ ಸಿದ್ದರಾಮಯ್ಯ
  • '90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ , ಬೇಕಿದ್ದರೆ ದಾನ ಮಾಡುತ್ತೇನೆ '
 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ - ಸಿದ್ದರಾಮಯ್ಯ ಎಚ್ಚರಿಕೆ  title=
ಟ್ವೀಟ್ ಮೂಲಕ ತಿರುಗೇಟು ನೀಡಿದ ಸಿದ್ದರಾಮಯ್ಯ (file photo)

ಬೆಂಗಳೂರು : ಇನ್ನೊಂದು ತಿಂಗಳಲ್ಲಿ ಸಿದ್ದರಾಮಯ್ಯ (Siddaramaiah) ಕಾಂಗ್ರೆಸ್ ಪಕ್ಷವನ್ನು ಬಿಡಲಿದ್ದಾರೆ ಎಂದಿದ್ದ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Naleen Kumar Kateel) ಹೇಳಿಕೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ  (Siddaramaiah) ಕಾಂಗ್ರೆಸ್ ನಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ಈ  ಹಿನ್ನೆಲೆಯಲ್ಲಿ ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Naleen Kumar Kateel) ಹೇಳಿಕೆ  ನೀಡಿದ್ದರು. ಈ ಹೇಳಿಕೆಗೆ ಇದೀಗ ತಿರುಗೇಟು ಟ್ವೀಟ್ (Tweet) ಮೂಲಕ ತಿರುಗೇಟು ನೀಡಿದ್ದಾರೆ. 

 

ಇದನ್ನೂ ಓದಿ :  Lockdown: ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು?

ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ (BJP)  ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಇನ್ನೂ 19 ಸಿಡಿ (CD) ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಎಚ್ಚರಿಕೆ ನೀಡಿದ್ದಾರೆ. 

ಇದನ್ನೂ ಓದಿ :  Laxman Savadi: ಸಾರಿಗೆ ನೌಕರರಿಗೆ ಸಿಹಿ ಸುದ್ದಿ: 'ಸದ್ಯದಲ್ಲೇ 6ನೇ ವೇತನ ಆಯೋಗ ಜಾರಿಗೆ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News