Watermelon Seeds Benefits:ಕಲ್ಲಂಗಡಿ ಬೀಜಗಳ ಪ್ರಯೋಜನಗಳನ್ನು ತಿಳಿದರೆ ನೀವು ಎಂದಿಗೂ ಅದನ್ನು ಎಸೆಯುವುದಿಲ್ಲ

ಕಲ್ಲಂಗಡಿ ಹಣ್ಣಿನ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದಿರಬಹುದು. ಆದರೆ ಹಣ್ಣು ತಿಂದ ಬಳಿಕ ನೀವು ಯಾವಾಗಲೂ ಡಸ್ಟ್‌ಬಿನ್‌ನಲ್ಲಿ ಎಸೆಯುವ ಕಲ್ಲಂಗಡಿ ಬೀಜಗಳ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ...

ಬೆಂಗಳೂರು: ಬೇಸಿಗೆ ಬಂತೆಂದರೆ ನೀರಿನ ಅಂಶ ಹೆಚ್ಚು ಹೊಂದಿರುವ ಹಣ್ಣು, ತರಕಾರಿಗಳನ್ನು ಸೇವಿಸುವುದು ಸಹಜ. ಬೇಸಿಗೆಯಲ್ಲಿ ವಿಶೇಷವಾಗಿ ಮಾವು, ಲಿಚ್ಚಿ ಮತ್ತು ಕಲ್ಲಂಗಡಿ ಮುಂತಾದ ಹಣ್ಣುಗಳು ಲಭ್ಯವಿರುತ್ತದೆ. ಕಲ್ಲಂಗಡಿ 92-93 ಪ್ರತಿಶತದಷ್ಟು ನೀರನ್ನು ಹೊಂದಿರುವುದರಿಂದ ಕಲ್ಲಂಗಡಿ ನಿಮ್ಮನ್ನು ಶಾಖದ ಹೊಡೆತದಿಂದ ಮತ್ತು ಅನಾರೋಗ್ಯದಿಂದ ರಕ್ಷಿಸುತ್ತದೆ. ಇದಲ್ಲದೆ, ವಿಟಮಿನ್ ಸಿ, ವಿಟಮಿನ್ ಎ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಸಾಕಷ್ಟು ಪೋಷಕಾಂಶಗಳು ಸಹ ಇದರಲ್ಲಿ ಕಂಡುಬರುತ್ತವೆ. ಆದ್ದರಿಂದ, ಕಲ್ಲಂಗಡಿ ಆರೋಗ್ಯದ ದೃಷ್ಟಿಯಿಂದಲೂ ತುಂಬಾ ಪ್ರಯೋಜನಕಾರಿಯಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

1 /5

ಕಲ್ಲಂಗಡಿ ಹಣ್ಣಿನ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದಿರಬಹುದು. ಆದರೆ ಹಣ್ಣು ತಿಂದ ಬಳಿಕ ನೀವು ಯಾವಾಗಲೂ ಡಸ್ಟ್‌ಬಿನ್‌ನಲ್ಲಿ ಎಸೆಯುವ ಕಲ್ಲಂಗಡಿ ಬೀಜಗಳ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ... ಕಲ್ಲಂಗಡಿ ಬೀಜಗಳ ಉಪಯೋಗಗಳ ಬಗ್ಗೆ ತಿಳಿದರೆ ನೀವು ಎಂದಿಗೂ ಅದನ್ನು ಡಸ್ಟ್‌ಬಿನ್‌ನಲ್ಲಿ ಎಸೆಯುವುದಿಲ್ಲ. ಕಲ್ಲಂಗಡಿಯ ಸಣ್ಣ ಕಪ್ಪು ಬಣ್ಣದ ಬೀಜಗಳ ಪ್ರಯೋಜನಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ಕಲ್ಲಂಗಡಿ ಬೀಜಗಳಲ್ಲಿ ಕ್ಯಾಲೊರಿ ಇರುವುದಿಲ್ಲ ಮತ್ತು ಸತು, ಕಬ್ಬಿಣ, ಫೋಲೇಟ್, ಪೊಟ್ಯಾಸಿಯಮ್ ನಂತಹ ಪೋಷಕಾಂಶಗಳು ಇರುತ್ತವೆ. ಇದಕ್ಕಾಗಿ, ಕಲ್ಲಂಗಡಿ ಬೀಜಗಳನ್ನು ಒಣಗಿಸಿ ನಂತರ ಅವುಗಳನ್ನು ಲಘುವಾಗಿ ಹುರಿಯಿರಿ ಮತ್ತು ಲಘು ಆಹಾರವಾಗಿ ತಿನ್ನಬಹುದು.

2 /5

ಕಲ್ಲಂಗಡಿ ಬೀಜಗಳಲ್ಲಿ ತಾಮ್ರ, ಮ್ಯಾಂಗನೀಸ್ ಮತ್ತು ಪೊಟ್ಯಾಸಿಯಮ್ ಇರುತ್ತವೆ, ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ಕಲ್ಲಂಗಡಿ ಬೀಜಗಳು ಮೂಳೆಯ ಸಾಂದ್ರತೆಯನ್ನು ಸುಧಾರಿಸಲು ಸಹ ಸಹಾಯ ಮಾಡುತ್ತದೆ. ಕಲ್ಲಂಗಡಿ ಬೀಜಗಳನ್ನು ಒಣಗಿಸುವುದರಿಂದ ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ - ಮೂಳೆಗಳ ರಕ್ಷಣೆಗೆ ಈ ರೀತಿ ಕಾಳಜಿ ವಹಿಸಿ  

3 /5

ಮಧುಮೇಹವನ್ನು ನಿಯಂತ್ರಿಸುವಲ್ಲಿ ಕಲ್ಲಂಗಡಿ ಬೀಜಗಳನ್ನು ಸಹ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಕಾರಣವೆಂದರೆ ಕಪ್ಪು ಬಣ್ಣದ ಈ ಸಣ್ಣ ಬೀಜಗಳು ರಕ್ತದಲ್ಲಿನ ಸಕ್ಕರೆ (Blood Sugar) ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ಇದು ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ. ಇದನ್ನೂ ಓದಿ - ಬೆಳಗಿನ ಉಪಹಾರದಲ್ಲಿ ಈ ಡ್ರಿಂಕ್ ಬಳಸಿ Blood Sugar Level ಕಂಟ್ರೋಲ್ ಮಾಡಿ

4 /5

ಕಲ್ಲಂಗಡಿ (Watermelon) ಬೀಜಗಳಲ್ಲಿ ಮೆಗ್ನೀಸಿಯಮ್ ಕಂಡುಬರುತ್ತದೆ, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡ ನೇರವಾಗಿ ಹೃದ್ರೋಗಕ್ಕೆ ಸಂಬಂಧಿಸಿದೆ. ಈ ಬೀಜಗಳನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯವು ಆರೋಗ್ಯಕರವಾಗಿರುತ್ತದೆ.  

5 /5

ಕಲ್ಲಂಗಡಿ ಬೀಜವು ಮೊಡವೆ ಮತ್ತು ಮುಖದ ಮೇಲೆ ಸುಕ್ಕಿನ ಗುರುತುಗಳಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಕಲ್ಲಂಗಡಿ ಬೀಜಗಳನ್ನು ಒಣಗಿಸಿ, ಹುರಿದು ತಿನ್ನುವುದರಿಂದ ಅದು ನಿಮ್ಮ ಚರ್ಮವನ್ನು ಆರೋಗ್ಯಕರವಾಗಿಸುತ್ತದೆ. ಮಾತ್ರವಲ್ಲದೆ ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ, ಬೀಜಗಳಲ್ಲಿ ಕಂಡುಬರುವ ಪೋಷಕಾಂಶಗಳು ಕೂದಲಿನ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಕೂದಲು ಉದುರುವಿಕೆಯ ಸಮಸ್ಯೆಯನ್ನು ನಿವಾರಿಸುತ್ತದೆ. (ಗಮನಿಸಿ: ಯಾವುದೇ ಪರಿಹಾರವನ್ನು ತೆಗೆದುಕೊಳ್ಳುವ ಮೊದಲು ಯಾವಾಗಲೂ ವೈದ್ಯರನ್ನು ಸಂಪರ್ಕಿಸಿ. ಜೀ ನ್ಯೂಸ್ ಈ ಮಾಹಿತಿಯ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ.)