Weekend Curfew in Delhi: ವೀಕ್-ಎಂಡ್ ಕರ್ಫ್ಯೂ ಮೊರೆಹೋದ ರಾಷ್ಟ್ರ ರಾಜಧಾನಿ

ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.  

Written by - Yashaswini V | Last Updated : Apr 15, 2021, 01:35 PM IST
  • ಕರೋನಾವೈರಸ್ ಪೀಡಿತ ನಗರಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಅಗ್ರಸ್ಥಾನದಲ್ಲಿದೆ
  • ಬುಧವಾರ ದೆಹಲಿಯಲ್ಲಿ ಹೊಸದಾಗಿ 17,282 ಕರೋನಾವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದಾಗಿ 104 ಜನರು ಸಾವನ್ನಪ್ಪಿದ್ದಾರೆ
  • ದೆಹಲಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,67,438 ತಲುಪಿದ್ದು, 11540 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ
Weekend Curfew in Delhi: ವೀಕ್-ಎಂಡ್ ಕರ್ಫ್ಯೂ ಮೊರೆಹೋದ ರಾಷ್ಟ್ರ ರಾಜಧಾನಿ title=
CM Arvind Kejriwal made a big announcement on Weekend Curfew

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ -19 ಪ್ರಕರಣಗಳು ಆತಂಕ ಹೆಚ್ಚುತ್ತಿವೆ ಮತ್ತು ಸಾವಿನ ಸಂಖ್ಯೆಯಲ್ಲಿಯೂ ನಿರಂತರ ಏರಿಕೆ ಕಂಡು ಬಂದಿದೆ. ಏತನ್ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಸಭೆ ನಡೆಸಿ ಕರೋನಾ ನಿಗ್ರಹಿಸುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ :
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ - ಮಕ್ಕಳನ್ನು Corona ಸೋಂಕಿನಿಂದ ರಕ್ಷಿಸುವ ಐದು Super Food

ದೆಹಲಿ ಕೋವಿಡ್ -19 ನಿಂದ ಹೆಚ್ಚು ಪ್ರಭಾವಿತವಾದ ನಗರ:
ಕರೋನಾವೈರಸ್ (Coronavirus) ಪೀಡಿತ ನಗರಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಅಗ್ರಸ್ಥಾನದಲ್ಲಿದೆ. ಬುಧವಾರ, ದೆಹಲಿಯಲ್ಲಿ ಹೊಸದಾಗಿ 17,282 ಕರೋನಾವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದಾಗಿ 104 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೆಹಲಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,67,438 ತಲುಪಿದ್ದು, 11540 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ, ಈಗ ಕರೋನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳು 50736 ಕ್ಕೆ ಏರಿದೆ. ಅದೇ ಸಮಯದಲ್ಲಿ, ಇಲ್ಲಿಯವರೆಗೆ, ಈ ಸಾಂಕ್ರಾಮಿಕದಿಂದ ಗುಣಮುಖರಾಗಿರುವವರ ಸಂಖ್ಯೆ 7,05,162ಕ್ಕೆ ತಲುಪಿದೆ.

ಇದನ್ನೂ ಓದಿ - Corona Vaccine: ಅಮೆರಿಕದ ನಂತರ ಈ ದೇಶದಲ್ಲೂ Johnson & Johnson ಲಸಿಕೆ ನಿಷೇಧ

ದೆಹಲಿಯ ಕೋವಿಡ್ ಬೆಡ್ಸ್ ಸ್ಥಿತಿ:
ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಆಸ್ಪತ್ರೆಗಳಲ್ಲಿ ಸಭಾಂಗಣಗಳನ್ನು ಸೇರಿಸಬೇಕೆಂದು ದೆಹಲಿ ಸರ್ಕಾರ ಆದೇಶಿಸಿದೆ. ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ -19 ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಒತ್ತು ನೀಡುತ್ತಿದೆ. ಒಟ್ಟು 13 ಸಾವಿರ ಹಾಸಿಗೆಗಳು ಸಿದ್ಧವಾಗಿವೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದಾರೆ. ಈಗ ಕೋವಿಡ್ ಬೆಡ್ಸ್  ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಲಾಗುತ್ತಿದೆ. ರಾಜಧಾನಿಯಲ್ಲಿ ವೆಂಟಿಲೇಟರ್‌ಗಳ ಕೊರತೆಯಿಲ್ಲ, ಸರ್ಕಾರದ ಅಪ್ಲಿಕೇಶನ್‌ನಲ್ಲಿನ ಡೇಟಾ ಸಂಪೂರ್ಣವಾಗಿ ಸರಿಯಾಗಿದೆ. ತನಿಖಾ ವರದಿಯಲ್ಲಿನ ವಿಳಂಬದ ಕುರಿತು, 24 ಗಂಟೆಗಳ ಒಳಗೆ ಹೆಚ್ಚಿನ ವರದಿಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಯಾವುದೇ ದೋಷ ಕಂಡು ಬಂದರೂ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News