ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ರಾಜ್ಯದ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಿದ್ದಾರೆ.
ರಜೆ ನಾಳೆಯಿಂದ (ಏಪ್ರಿಲ್ 20) ಪ್ರಾರಂಭವಾಗಿ ಜೂನ್ ವರೆಗೆ ಮುಂದುವರಿಯುತ್ತದೆ. ಹೆಚ್ಚುತ್ತಿರುವ ಕೋವಿಡ್-19(COVID-19) ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆರಂಭಿಕ ರಜೆಯನ್ನು ಘೋಷಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ : PM Narendra Modi: ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ ತಜ್ಞ ವೈದ್ಯರು & ಫಾರ್ಮಾ ಕಂಪನಿಗಳ ಜೊತೆ ಪ್ರಧಾನಿ ಮೋದಿ ಸಭೆ !
"ನಾಳೆಯಿಂದ ಜೂನ್ ವರೆಗೆ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆ(School Summer Vacation) ಪ್ರಾರಂಭಿಸಲು ನಾವು ನಿರ್ಧರಿಸಿದ್ದೇವೆ" ಎಂದು ಬ್ಯಾನರ್ಜಿ ಹೇಳಿದ್ದಾರೆ.
ಇದನ್ನೂ ಓದಿ : ಎಲ್ಐಸಿ ಗ್ರಾಹಕರಿಗೆ ಗುಡ್ ನ್ಯೂಸ್.! ಪೇಟಿಎಂ ಜೊತೆ ಏರ್ಪಟ್ಟ ಒಪ್ಪಂದ ಏನು..?
ಕೋವಿಡ್-19 ಪರಿಸ್ಥಿತಿಯ ಬಗ್ಗೆ ಜನರು ಭಯಭೀತರಾಗಬಾರದು ಮತ್ತು ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ(West Bengal Govt)ವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ : Delhi Lockdown: ಮದ್ಯ ಖರೀದಿಗೆ ಮುಗಿಬಿದ್ದ ಜನ, ಔಷಧಿ ಅಲ್ಲ ಪೆಗ್ ಕೆಲಸಕ್ಕೆ ಬರುತ್ತೆ ಎಂದ ಮಹಿಳೆ
ಆಸ್ಪತ್ರೆಗಳಲ್ಲಿ(Hospitals) ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವಂತಹ ಬಿಕ್ಕಟ್ಟನ್ನು ಎದುರಿಸಲು ನಮ್ಮ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ : West Bengal Election 2021: ಕೊರೊನಾ ಬಿಕ್ಕಟ್ಟಿನ ಮಧ್ಯೆ ಪ್ರಧಾನಿ ಮೋದಿ ಎಲೆಕ್ಷನ್ ಪ್ರಚಾರ: ಒಂದೇ ದಿನ 4 ರ‍್ಯಾಲಿ!
ರಾಜ್ಯದಲ್ಲಿ ಕೊರೋನಾ ಲಸಿಕೆ(Corona Vaccines) ಪ್ರಮಾಣಗಳ ಕೊರತೆ ಇದೆ ಅದಕ್ಕೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿರುವುದಾಗಿ ಹೇಳಿದರು. ಲಸಿಕೆಗಳು, ಮೆಡಿಸಿನ್ಸ್ ಗಳು ಮತ್ತು ಆಕ್ಸಿಜನ್ ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕೇಂದ್ರವು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.