ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಭದ್ರತಾ ಸಿಬ್ಬಂದಿಯೊಂದಿಗೆ ನಡೆಸಲಾದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಶನಿವಾರ ಗುಂಡಿಗೆ ಬಲಿಯಾಗಿದ್ದಾರೆ.
ಅನಂತ್ ನಾಗ್ ಜಿಲ್ಲೆಯ ಡೂರು ಪ್ರದೇಶದಲ್ಲಿ ಉಗ್ರರು ಅಡಗಿರುವುದರ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ, ಜಮ್ಮು-ಕಾಶ್ಮೀರ ಪೊಲೀಸರು ಹಾಗೂ CRPF ಯೋಧರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
#SpotVisuals: 2 terrorists gunned down in an encounter with security personnel in Anantnag's Dooru area, encounter over. #JammuAndKashmir (visuals deferred) pic.twitter.com/OGUvAHcbq6
— ANI (@ANI) March 24, 2018
ಅನಂತ್ ನಾಗ್'ನ ಡೂರು ಪ್ರದೇಶದಲ್ಲಿ ಶುಕ್ರವಾರ ರಾತ್ರಿಯಿಂದ ಎನ್ಕೌಂಟರ್ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆಯ ಸಂದರ್ಭದಲ್ಲಿ, ಶಸ್ತ್ರಾಸ್ತ್ರ ಮತ್ತು ಯುದ್ಧಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈ ವಾರ ಮುಂಚೆ ಜಮ್ಮು ಮತ್ತು ಕುಪ್ವಾರಾ ಜಿಲ್ಲೆಯ 48 ಗಂಟೆಗಳ ಉದ್ದದ ಗನ್ ಬಾಟಲ್ ಬಳಿಕ ಐದು ಭಯೋತ್ಪಾದಕರು ಮತ್ತು ಸಮಾನ ಸಂಖ್ಯೆಯ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.