"ರಾಜ್ಯಗಳಿಗೆ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ"

ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಭಾಷಣದ ವಿರುದ್ಧ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ.

Last Updated : Apr 21, 2021, 01:20 AM IST
  • ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ.
  • ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ.ಕೊರೊನಾ ಉಲ್ಭಣಗೊಂಡಿರುವ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಸರ್ಕಾರ ಮಾತನಾಡುತ್ತಿದೆ.
"ರಾಜ್ಯಗಳಿಗೆ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ" title=
file photo

ಬೆಂಗಳೂರು: ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಭಾಷಣದ ವಿರುದ್ಧ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ.ರಾಜ್ಯದಲ್ಲಿ ಕೊರೊನಾ ಸೋಂಕಿತರು‌ ಚಿಕಿತ್ಸೆಗೆ ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ,‌ ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ" ಎಂದರು

ಇದನ್ನೂ ಓದಿ: ಒಂದು ವಾರಗಳ ಸಂಪೂರ್ಣ ಲಾಕ್ ಡೌನ್ ಫೋಷಿಸಿದ ದೆಹಲಿ ಸರ್ಕಾರ

ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ.ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ.ಕೊರೊನಾ ಉಲ್ಭಣಗೊಂಡಿರುವ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಸರ್ಕಾರ ಮಾತನಾಡುತ್ತಿದೆ ಎಂದು ಟೀಕಿಸಿದರು.

ಲಾಕ್ ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು.ಮೋದಿ ಭಾಷಣ 'ನಿಮ್ಮ ತಲೆ ಮೇಲೆ ನಿಮ್ಮ‌ ಕೈ' ಎಂಬ ಸಂದೇಶ ನೀಡಿದೆ.ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವನ್ನು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Delhi Lockdown: ಮದ್ಯ ಖರೀದಿಗೆ ಮುಗಿಬಿದ್ದ ಜನ, ಔಷಧಿ ಅಲ್ಲ ಪೆಗ್ ಕೆಲಸಕ್ಕೆ ಬರುತ್ತೆ ಎಂದ ಮಹಿಳೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News