ರಾಹುಲ್ ಗಾಂಧಿ ನನಗೆ ಲೆಕ್ಕಕ್ಕೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

ಜೆಡಿಎಸ್ ಸಿದ್ಧಾಂತದ ಬಗ್ಗೆ ಪ್ರಶ್ನೆ ಮಾಡಲು ರಾಹುಲ್ ಯಾರು? ರಾಹುಲ್ ನನಗೆ ಲೆಕ್ಕಕ್ಕೇ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. 

Last Updated : Mar 26, 2018, 04:43 PM IST
ರಾಹುಲ್ ಗಾಂಧಿ ನನಗೆ ಲೆಕ್ಕಕ್ಕೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ title=

ಮಂಡ್ಯ: ಜೆಡಿಎಸ್ ಜಾತ್ಯಾತೀತ ಪಕ್ಷ ಅಲ್ಲ ಎಂದು ಟೀಕಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಸಿದ್ಧಾಂತದ ಬಗ್ಗೆ ಪ್ರಶ್ನೆ ಮಾಡಲು ರಾಹುಲ್ ಯಾರು? ರಾಹುಲ್ ನನಗೆ ಲೆಕ್ಕಕ್ಕೇ ಇಲ್ಲ ಎಂದು ಗುಡುಗಿದ್ದಾರೆ. 

ಮಂಡ್ಯ ತಾಲೂಕಿನ ಹೆಬ್ಬಕವಾಡಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ಪಕ್ಷಕ್ಕಾಗಲೀ, ರಾಹುಲ್ ಗಾಂಧಿಗಾಗಲೀ ನಾನು ಗುಲಾಮನಲ್ಲ, ನಾನು ರಾಜ್ಯದ 6 ಕೋಟಿ ಜನತೆಯ ಗುಲಾಮ, ನನ್ನ ನಿರ್ಧಾರಗಳ ಬಗ್ಗೆ ಪ್ರಶ್ನಿಸಲು ಅಧಿಕಾರ ಇರುವುದು ಕನ್ನಡಿಗರಿಗೆ ಮಾತ್ರ ಎಂದು ಹೇಳಿದರು.

ಮುಂದುವರೆದು, ಜೆಡಿಎಸ್ ಅವಕಾಶವಾದಿ ಪಕ್ಷ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, ಅವಕಾಶವಾದಿ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ. ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್‌ ಕಾಲು ಹಿಡಿದುಕೊಂಡವರು ಯಾರು? ಬಿಬಿಎಂಪಿ ಅಧಿಕಾರಕ್ಕಾಗಿ ಯಾರು ಯಾರು ಮನೆಗೆ ಬಂದಿದ್ದರು ಎಂದು ಲೇವಡಿ ಮಾಡಿದರಲ್ಲದೆ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ಯಾವ ನೈತಿಕ ಅರ್ಹತೆಯೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

Trending News