OxyBus service : ಕೊರೋನಾ ತುರ್ತು ಚಿಕಿತ್ಸೆಗಾಗಿ 'ಆಕ್ಸಿಬಸ್'ಗೆ ಚಾಲನೆ ನೀಡಿದ ಸಿಎಂ ಬಿಎಸ್‌ವೈ!

 ತಾತ್ಕಾಲಿಕವಾಗಿ ಆಕ್ಸಿಬಸ್ ಗಳು 8 ರೋಗಿಗಳಿಗೆ ನೆರವಾಗಲಿದೆ

Last Updated : May 11, 2021, 04:47 PM IST
  • ತುರ್ತು ಸಂದರ್ಭಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 'ಆಕ್ಸಿಬಸ್' ಸೇವೆ
  • ಸಿಎಂ ಬಿಎಸ್ ಯಡಿಯೂರಪ್ಪ ಇಂದು ಚಾಲನೆ
  • ತಾತ್ಕಾಲಿಕವಾಗಿ ಆಕ್ಸಿಬಸ್ ಗಳು 8 ರೋಗಿಗಳಿಗೆ ನೆರವಾಗಲಿದೆ
OxyBus service : ಕೊರೋನಾ ತುರ್ತು ಚಿಕಿತ್ಸೆಗಾಗಿ 'ಆಕ್ಸಿಬಸ್'ಗೆ ಚಾಲನೆ ನೀಡಿದ ಸಿಎಂ ಬಿಎಸ್‌ವೈ! title=

ಬೆಂಗಳೂರು : ತುರ್ತು ಸಂದರ್ಭಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 'ಆಕ್ಸಿಬಸ್' ಸೇವೆಗೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ.

'ಆಕ್ಸಿಬಸ್' (OxyBus service)ಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿಎಂ ಯಡಿಯೂರಪ್ಪ, ತಾತ್ಕಾಲಿಕವಾಗಿ ಆಕ್ಸಿಬಸ್ ಗಳು 8 ರೋಗಿಗಳಿಗೆ ನೆರವಾಗಲಿದೆ. ಅಂತಹ 20 ಬಸ್ ಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಚಿಕಿತ್ಸಾ ಕೇಂದ್ರಗಳ ಬಳಿ ಇರಿಸಲಾಗುವುದು ಅಲ್ಲದೆ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ಇರಿಸಲಾಗುವುದು ಎಂದು ಹೇಳಿದ್ದಾರೆ. 

ಇದನ್ನೂ ಓದಿ : Indira Canteen : ರಾಜ್ಯದ ಎಲ್ಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ..! 

ಗಂಭೀರ ರೋಗಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲು ದಾರಿ ಮಾಡಿಕೊಡಿ ಅನಗತ್ಯವಾಗಿ ಆಸ್ಪತ್ರೆಗಳಲ್ಲಿ ಉಳಿದುಕೊಳ್ಳಬೇಡಿ ಕೋವಿಡ್ ರೋಗಿಗಳು ಮನೆಗೆ ಹೋಗಿ ಎಂದು ಸಿಎಂ(BS Yediyurappa) ಮನವಿ ಮಾಡಿದ್ದಾರೆ.

ಇದನ್ನೂ ಓದಿ : Oxygen Express Train : ಬೆಂಗಳೂರು ತಲುಪಿದ ಕೇಂದ್ರದ 120 ಟನ್ ಆಕ್ಸಿಜನ್ ಹೊತ್ತ ವಿಶೇಷ ರೈಲು..!

332 ರೋಗಿಗಳು(Covid-19 Patients) 30 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾದ ಅವಶ್ಯಕತೆ ಏನು? ಆಸ್ಪತ್ರೆಯಲ್ಲಿ 503 ರೋಗಿಗಳು 20 ದಿನಗಳಿಂದ ಇದ್ದಾರೆ. ಈ ರೀತಿ ಅನಗತ್ಯವಾಗಿ ಆಸ್ಪತ್ರೆಯಲ್ಲಿ ಉಳಿದುಕೊಂಡಿರುವ ಜನರು ಮನೆಗೆ ಮರಳಬೇಕು" ಎಂದು ಅವರು ಹೇಳಿದರು.

ಇದನ್ನೂ ಓದಿ : Ravi D Channannavar : SP ರವಿ ಡಿ ಚೆನ್ನಣ್ಣನವರಿಗೆ ಕೊರೋನಾ ಪಾಸಿಟಿವ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News