ಉಡುಪಿ : ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗೆ ಇರಲಿದ್ದು, ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡದಲ್ಲಿ ಭಾರೀ ಮಳೆ(Rainfall Alert) ಆಗಲಿದೆ. ಈ ಹಿನ್ನಲೆಯಲ್ಲಿ ಇಂದು ಕರಾವಳಿ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಣೆ ಮಾಡಲಾಗಿದ್ದು, ಮೇ 17 ಮತ್ತು ೧8 ರಂದು 'ಎಲ್ಲೋ ಅಲರ್ಟ್' ಘೋಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
Due to cyclone #Tauktae, heavy to extremely heavy rainfall was observed over 6 districts, 3 coastal districts and 3 Malnad districts in the past 24 hours. So far, 4 people have lost their lives, 73 villages affected: Karnataka State Disaster Management Authority (KSDMA) pic.twitter.com/VPb4U111eQ
— ANI (@ANI) May 16, 2021
ಇದನ್ನೂ ಓದಿ : Tauktae Cyclone : ತೌಕ್ತೆ ಚಂಡಮಾರುತಕ್ಕೆ ತತ್ತರಿಸಿದ ರಾಜ್ಯ ಕರಾವಳಿ ಪ್ರದೇಶ..!
ಇನ್ನು ತೌಕ್ತೆ ಚಂಡಮಾರುತ(Tauktae Cyclone) ಸದ್ಯ ಅರಬ್ಬೀ ಸಮುದ್ರದ ಮಧ್ಯ ಭಾಗದಲ್ಲಿದ್ದು, ತೀವ್ರಗೊಳ್ಳುತ್ತಾ ಗುಜರಾತ್ ಕಡೆಗೆ ಚಲಿಸೋ ಮುನ್ಸೂಚನೆ ಇದೆ. ಈ ಕಾರಣದಿಂದ ಮುಂದಿನ ಮೂರು ದಿನಗಳ ಕಾಲ ಈ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೆ ತೀವ್ರವಾಗಿರಲಿದೆ ಎಂದು ಸಿಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : HD Deve Gowda : 'ಈ ಸಂಕಷ್ಟದಲ್ಲಿ ನನ್ನ ಹುಟ್ಟುಹಬ್ಬ ಆಚರಿಸುವುದು ಬೇಡ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.