BC Patil : ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ₹ 50 ಸಾವಿರ ಪರಿಹಾರ ಘೋಷಿಸಿದ ಕೃಷಿ ಸಚಿವ!

ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಧನ

Last Updated : May 17, 2021, 12:10 PM IST
  • ಕೊವೀಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 50 ಸಾವಿರ ರೂ.
  • ಪರಿಹಾರ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ.
  • ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆಯಿಂದ ಮೃತ
BC Patil : ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ₹ 50 ಸಾವಿರ ಪರಿಹಾರ ಘೋಷಿಸಿದ ಕೃಷಿ ಸಚಿವ! title=

ಹಾವೇರಿ : ಕೊವೀಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್(BC Patil), ಹಿರೇಕೆರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಧನ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : Heavy Rain : ಗುಜರಾತಿನತ್ತ ಪಯಣ ಬಳಸಿದ ತೌಕ್ತೆ ಸೈಕ್ಲೋನ್ : ರಾಜ್ಯದಲ್ಲಿ ಮೇ 20ರವರೆಗೆ ಭಾರೀ ಮಳೆ!

ಹಿರೇಕೆರೂರು ಮತ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು 18 ಮಂದಿ ಕೊರೋನಾ(Corona)ದಿಂದ ಮೃತಪಟ್ಟಿದ್ದಾರೆ. ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ.

ಇದನ್ನೂ ಓದಿ : Cyclone Tauktae : ತೌಕ್ತೆ ಚಂಡಮಾರುತದ ಅಬ್ಬರಕ್ಕೆ ರಾಜ್ಯದಲ್ಲಿ 4 ಜನ ಬಲಿ..!

ಕೆಲ ದಿನಗಳ ಹಿಂದೆ ಹಿರೇಕೆರೂರು ಕ್ಷೇತ್ರ(Hirekerur Constituency)ದ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ : Rainfall Alert : ತೌಕ್ತೆ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News