ನವದೆಹಲಿ : ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗೆ 'ಯಾಸ್ ಚಂಡಮಾರುತ' ಅಪ್ಪಳಿಸಲಿದ್ದು, ಈ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA), ದೂರಸಂಪರ್ಕ, ವಿದ್ಯುತ್, ನಾಗರಿಕ ವಿಮಾನಯಾನ, ಭೂ ವಿಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಯಾಸ್ ಚಂಡಮಾರುತದ ವಿರುದ್ಧದ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಮಣಿಪುರದಲ್ಲಿ ಕಂಪಿಸಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲು
ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಮತ್ತು ಇತರ ಸಚಿವರು ಸಹ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗೆ ಇಂದು ಯಾಸ್ ಚಂಡಮಾರುತ ಅಪ್ಪಳಿಸಲಿದ್ದು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಎಂಜಿನಿಯರ್ ಕಾರ್ಯಪಡೆಗಳು ಸನ್ನದ್ಧವಾಗಿವೆ ಮತ್ತು ಕಾಲಂಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಭಾರತೀಯ ಸೇನೆ ಶನಿವಾರ ಮಾಹಿತಿ ನೀಡಿದೆ.
ಇದನ್ನೂ ಓದಿ : CBSE 12 ನೇ ತರಗತಿಯ ಪ್ರಮುಖ ವಿಷಯಗಳಿಗೆ ಮಾತ್ರ ನಡೆಯಲಿದೆಯೇ ಪರೀಕ್ಷೆ?