BS Yediyurappa : ಕೊರೋನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ!

ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ

Last Updated : Jun 14, 2021, 02:40 PM IST
  • ಕೊರೋನಾದಿಂದ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ
  • ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ
  • ಸುಮಾರು 250 ರಿಂದ 300 ಕೋಟಿ ರೂ. ಖರ್ಚಾಗುತ್ತದೆ
BS Yediyurappa : ಕೊರೋನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ! title=

ಬೆಂಗಳೂರು : ಕೊರೋನಾದಿಂದ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಇಂದು ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ(BS Yediyurappa), ಕುಟುಂಬದಲ್ಲಿ ದುಡಿಯುವ ವ್ಯಕ್ತಿ ಮೃತಪಟ್ಟರೆ ಒಂದು ಕುಟುಂಬದಲ್ಲಿ ಒಬ್ಬರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ : BS Yediyurappa : 'ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ'

ಬಿಪಿಎಲ್ ಕಾರ್ಡ್(BPL Card) ಹೊಂದಿರುವ ಕುಟುಂಬದಲ್ಲಿ ಕೋವಿಡ್‌ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು 20 ರಿಂದ 30 ಸಾವಿರ ಕುಟುಂಬಕ್ಕೆ ನೆರವು ಸಿಗಲಿದೆ. ಇದಕ್ಕಾಗಿ ಸುಮಾರು 250 ರಿಂದ 300 ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲು ಇಂತಹ ಹಣಕಾಸು ಯೋಜನೆಯನ್ನು ನಾವು ನೀಡುತ್ತಿದ್ದೇವೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Lockdown Relaxation in Karnataka : ಇಂದಿನಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್​ಡೌನ್​ ಸಡಿಲಿಕೆ!

ಕೋವಿಡ್‌ ಗೆ ಕುಟುಂಬದಲ್ಲಿ ಅಪ್ರಾಪ್ತರು ಬಲಿಯಾಗಿದ್ದರೆ ಪರಿಹಾರ ಸಿಗುವುದಿಲ್ಲ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ 1 ಲಕ್ಷ ರೂ. ಪರಿಹಾರ(Compensation) ಸಿಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Heavy Rainfall in Karnataka : ಇಂದಿನಿಂದ ಜೂ.17 ರವರೆಗೆ ರಾಜ್ಯದಲ್ಲಿ ಭಾರೀ ಮಳೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News