ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ : SSLC exam 2021 : SSLC ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ 'ಪ್ರಶ್ನೆಪತ್ರಿಕೆ' ಪ್ರಕಟ : ಇಲ್ಲಿದೆ ಡೌನ್ ಲೋಡ್ ಮಾಡುವ ವಿಧಾನ!
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಉಡುಪಿ, ಒಡಿಶಾ, ಕೇರಳದ ಕೋಳಿಕೋಡ್ ವಯನಾಡಿನಲ್ಲಿ ಇಂದು ಅಧಿಕ ಮಳೆ(Heavy Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : e-Sahamati App : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ 'ಗುಡ್ ನ್ಯೂಸ್'!
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇನ್ನೆರಡು ದಿನ ಯೆಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ.
ಇದನ್ನೂ ಓದಿ : Heavy Rain in Karnataka : ಮುಂಗಾರು ಆರ್ಭಟಕ್ಕೆ ರಾಜ್ಯ ತತ್ತರ : ಜೂ.18 ರವರೆಗೂ ಭಾರೀ ಮಳೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.