ನವದೆಹಲಿ : ಕೊರೋನಾ 2ನೇ ಅಲೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ವಿತರಣೆ ಮಾಡಲು ಕೇಂದ್ರ ಸರ್ಕಾರ ಆದೇಶ ನೀಡಿದೆ.
ಈ ಕುರಿತಂತೆ ಬುಧವಾರ ನಡೆದ ಕೇಂದ್ರ ಸಂಪುಟಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKAY) ಅಡಿಯಲ್ಲಿ ವಿತರಿಸಲಾಗುವ ಉಚಿತ ಪಡಿತರವನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಣೆ ಮಾಡಲು ಸಂಪುಟ ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಣಯದಿಂದ ದೇಶದ ಸುಮಾರು 80 ಕೋಟಿ ಫಲಾನುಭವಿಗಳು ಇನ್ನೂ 5 ತಿಂಗಳು ಹೆಚ್ಚುವರಿ ಅಂದರೆ ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ಪಡೆಯಬಹುದಾಗಿದೆ.
ಇದನ್ನೂ ಓದಿ : ಹಣದ ಅಗತ್ಯವಿದೆಯೇ? ಪಾಲಿಸಿ ಮೇಲೆ LIC ನೀಡುತ್ತಿದೆ ಕಡ್ಡಿಮೆ ಬಡ್ಡಿದರದ ಸಾಲ
ಕೋವಿಡ್ ಎರಡನೇ ಅಲೆ(Covid 2nd Wave)ಯಲ್ಲಿ ಬಡ ಪಿಡಿಎಸ್ (ಸಾರ್ವಜನಿಕ ವಿತರಣಾ ವ್ಯವಸ್ಥೆ) ಫಲಾನುಭವಿಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಕಡಿಮೆ ಮಾಡುವ ಸಲುವಾಗಿ ಈ ವರ್ಷದ ಜೂನ್ವರೆಗೆ ಎರಡು ತಿಂಗಳ ಕಾಲ ಪಿಎಂಜಿಕೆ ಯೋಜನೆಯನ್ನು ಪುನಃ ಪರಿಚಯಿಸಲಾಗಿತ್ತು. ಆದರೆ ಇದೀಗ ಈ ಯೋಜನೆಯನ್ನು ಮತ್ತೆ 5 ತಿಂಗಳುಗಳಿಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ : New Wage Code: ಇನ್ನು ಸಿಗಲಿದೆ 300 ದಿನಗಳ Earned Leave! ಮೂರು ದಿನಗಳ ವಾರದ ರಜೆ ?
ಈ ಹಿಂದೆ ಜೂನ್ 7ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ(Narendra Modi), 'ಪ್ರತಿಯೊಬ್ಬ ಬಡ ನಾಗರಿಕರೊಂದಿಗೆ ಸರ್ಕಾರವೂ ಜೊತೆಗಿರುತ್ತದೆ. ನವೆಂಬರ್ವರೆಗೆ ಎಲ್ಲ 80 ಕೋಟಿ ಮಂದಿಗೆ, ಉಚಿತವಾಗಿ ಧಾನ್ಯ ವಿತರಿಸಲಾಗುತ್ತದೆ. ಈ ಯೋಜನೆಯು ದೀಪಾವಳಿವರೆಗೂ ಮುಂದುವರಿಯಲಿದೆ ಎಂದು ಹೇಳಿದ್ದರು.
ಇದನ್ನೂ ಓದಿ : Corona Delta Plus Variant: ಈ 8 ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದೆ ಡೆಲ್ಟಾ ಪ್ಲಸ್ ರೂಪಾಂತರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.