ಬೆಂಗಳೂರು: ಕೆಲವು ಕೋವಿಡ್-19 ನಿರ್ಬಂಧಗಳನ್ನು ಸಡಿಲಗೊಳಿಸಿ ರಾಜ್ಯ ಸರ್ಕಾರ ಜನತೆಗೆ ಬಿಗ್ ರಿಲೀಫ್ ನೀಡಿದೆ. ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಮತ್ತು ಸೋಮವಾರ(ಜುಲೈ 19)ದಿಂದ ಚಿತ್ರಮಂದಿರಗಳನ್ನು ಓಪನ್ ಮಾಡಲು ಅನುಮತಿ ನೀಡಲಾಗಿದೆ. ಇದರ ಜೊತೆಗೆ ಕೆಲವು ಲಾಕ್ಡೌನ್ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa) ನೇತೃತ್ವದಲ್ಲಿ ಭಾನುವಾರ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪ್ರಮುಖವಾಗಿ ಮುಂದಿನ ವಾರದಿಂದ ಅಂದರೆ ಜುಲೈ 26 ರಿಂದ ಪದವಿ ಕಾಲೇಜುಗಳನ್ನು ತೆರೆಯಲು(College Reopen)ನಿರ್ಧರಿಸಲಾಗಿದೆ. ಆಫ್ಲೈನ್ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಲಸಿಕೆ ಪಡೆದಿರಬೇಕು. ಕನಿಷ್ಟ 1 ಡೋಸ್ ಲಸಿಕೆಯನ್ನಾದರೂ ಹಾಕಿಸಿಕೊಂಡವರಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
Colleges and institutions of Department of Higher Education are permitted to re-open from 26/7/2021. Only students, teaching, non-teaching/other staff who have taken at least one dose of COVID-19 vaccine will be permitted. Attendance of students is optional.
2/3 pic.twitter.com/YLWPzZr4Ii
— Dr. Ashwathnarayan C. N. (@drashwathcn) July 18, 2021
ಇದನ್ನೂ ಓದಿ: Heavy Rain : ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆ!
ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ತರಗತಿಗಳಿಗೆ ಹಾಜರಾಗುವ ಮೊದಲು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕ ವರ್ಗ ಮತ್ತು ಸಿಬ್ಬಂದಿ ಕನಿಷ್ಠ ಒಂದು ಡೋಸ್ ಕೊರೊನಾ ಲಸಿಕೆ(Corona Vaccine)ಯನ್ನು ಪಡೆದಿರಬೇಕೆಂಬ ಷರತ್ತಿನ ಮೇರೆಗೆ ಜುಲೈ 26 ರಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಪುನಃ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ನೈಟ್ ಕರ್ಫ್ಯೂ(Night Curfew)ಗೆ 1 ಗಂಟೆ ವಿನಾಯತಿ ನೀಡಲಾಗಿದ್ದು, ರಾತ್ರಿ 10 ರಿಂದ ಬೆಳಗ್ಗೆ 5 ರವರಗೆ ವಿಧಿಸಲು ತೀರ್ಮಾನಿಸಲಾಗಿದೆ. ಪಬ್ ಮತ್ತು ಈಜುಕೊಳ ತೆರೆಯಲು ಅನುಮತಿ ನೀಡಿಲ್ಲ. ಅಲ್ಲದೆ ಅನೇಕ ತಿಂಗಳುಗಳಿಂದ ಬಂದ್ ಆಗಿರುವ ಚಿತ್ರಮಂದಿರಗಳನ್ನು ಪುನಃ ತೆರೆಯಲು ಕೂಡ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶೇ.50ರಷ್ಟು ಮಾತ್ರ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ಮಂಡ್ಯದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಜಿ.ಮಾದೇಗೌಡ ಇನ್ನಿಲ್ಲ
ಸಭೆಯಲ್ಲಿ ತೆಗೆದುಕೊಂಡ ಕೆಲ ನಿರ್ಣಯಗಳು
1) ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.
2) ಸಿನೆಮಾ ಹಾಲ್ಗಳು/ ಮಲ್ಟಿಪ್ಲೆಕ್ಸ್ ಗಳು/ಚಿತ್ರಮಂದಿರಗಳು/ ರಂಗಮಂದಿರಗಳು/ಸಭಾಂಗಣಗಳಿಗೆ ಶೇ.50ರಷ್ಟು ಆಸನ ಸಾಮರ್ಥ್ಯಕ್ಕೆ ಅವಕಾಶ ನೀಡಲಾಗಿದೆ. ಕೋವಿಡ್-19 ಮಾರ್ಗಸೂಚಿ ಮತ್ತು ಸಂಬಂಧಿಸಿದ ಇಲಾಖೆಗಳು ನೀಡುವ SOP ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
3) ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕಾಲೇಜುಗಳು ಮತ್ತು ಸಂಸ್ಥೆಗಳನ್ನು ಜುಲೈ 26ರಿಂದ ಪುನಃ ತೆರೆಯಲು ಅನುಮತಿ ನೀಡಲಾಗಿದೆ. ಕೋವಿಡ್-19 ಮಾರ್ಗಸೂಚಿಗಳು ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ SOP ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ/ಇತರ ಸಿಬ್ಬಂದಿಗೆ ಮಾತ್ರ ಕಾಲೇಜು/ಸಂಸ್ಥೆಗಳಿಗೆ ಹಾಜರಾಗಲು ಅನುಮತಿ ಇರುತ್ತದೆ. ವಿದ್ಯಾರ್ಥಿಗಳ ಹಾಜರಾತಿಯು ಕಡ್ಡಾಯವಾಗಿರುವುದಿಲ್ಲ.
4) ಕೋವಿಡ್-19 ಮಾರ್ಗಸೂಚಿ(Corona Guidelines)ಗಳ ಕಟ್ಟುನಿಟ್ಟಾದ ಪಾಲನೆಯೊಂದಿಗೆ ದೀರ್ಘಕಾಲೀಕ ತಾಂತ್ರಿಕ ಕೋರ್ಸ್ಗಳನ್ನು ಒಳಗೊಂಡಂತೆ ಎಲ್ಲಾ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅನುಮತಿ ನೀಡಲಾಗಿದೆ. ಲಸಿಕೆಯ ಕನಿಷ್ಠ 1 ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ/ಇತರ ಸಿಬ್ಬಂದಿಗೆ ಮಾತ್ರ ಸಂಸ್ಥೆಗಳಿಗೆ ಹಾಜರಾಗಲು ಅನುಮತಿ ಇರುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ