SSLC Exam: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಎರಡು ದಿನ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅವಧಿ ಮೂರು ಗಂಟೆ ಇರುತ್ತದೆ. ಪರೀಕ್ಷೆಗಳು ಒಎಂಆರ್ ಹಾಳೆಗಳಲ್ಲಿ ನಡೆಯಲಿದ್ದು, ಅಲ್ಲಿ ವಿದ್ಯಾರ್ಥಿಗಳಿಗೆ ಸರಳ ಮತ್ತು ನೇರ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗುತ್ತದೆ.

Written by - Yashaswini V | Last Updated : Jul 19, 2021, 07:55 AM IST
  • ಈ ವರ್ಷ 1.19 ಲಕ್ಷ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಕಳೆದ ವರ್ಷದಲ್ಲಿ 80,000 ಮಂದಿಯನ್ನು ನಿಯೋಜಿಸಲಾಗಿತ್ತು
  • 2020 ರಲ್ಲಿ 3,310 ಆಗಿದ್ದ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 4,885 ಕ್ಕೆ ಹೆಚ್ಚಿಸಲಾಗಿದೆ
  • ಪರೀಕ್ಷಾ ಕೊಠಡಿಗಳನ್ನು ಸಹ ಕಳೆದ ವರ್ಷ 48,000 ದಿಂದ 73,064 ಕ್ಕೆ ಹೆಚ್ಚಿಸಲಾಗಿದೆ
SSLC Exam: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ title=
Representational Image

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಜುಲೈ 19 ಮತ್ತು 22 ರಂದು ಕರ್ನಾಟಕ ಸರ್ಕಾರ ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಅಥವಾ 10 ನೇ ತರಗತಿ ಪರೀಕ್ಷೆಯನ್ನು ನಡೆಸಲಿದೆ. ಇಂದು ಜುಲೈ 19 ರಂದು ಕೋರ್ ವಿಷಯ ಪರೀಕ್ಷೆ - ವಿಜ್ಞಾನ, ಗಣಿತ ಮತ್ತು ಸಾಮಾಜಿಕ ವಿಜ್ಞಾನ ಪರೀಕ್ಷೆ ನಡೆಯಲಿದ್ದು, ಜುಲೈ 22 ರಂದು ಭಾಷೆಗಳ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Exam) ಅವಧಿ ಮೂರು ಗಂಟೆ ಇರುತ್ತದೆ. ಪರೀಕ್ಷೆಯು ಒಎಂಆರ್ ಹಾಳೆಗಳಲ್ಲಿ ನಡೆಯಲಿದ್ದು, ಅಲ್ಲಿ ವಿದ್ಯಾರ್ಥಿಗಳಿಗೆ ಸರಳ ಮತ್ತು ನೇರ ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಕೋವಿಡ್-19 (COVID-19) ಸಾಂಕ್ರಾಮಿಕದ ಭೀತಿಯ ಮಧ್ಯೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಇಂದಿನಿಂದ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಮತ್ತು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ (ಕೆಎಸ್‌ಇಇಬಿ) ಅಧಿಕಾರಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (SSLC Exam) ಸಜ್ಜಾಗಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ- Heavy Rain in Karnataka : ರಾಜ್ಯದಲ್ಲಿ ಜು. 21ರವರೆಗೂ ಭಾರೀ ಮಳೆ : ಹವಾಮಾನ‌ ಇಲಾಖೆ ಮಾಹಿತಿ

ಈ ವರ್ಷ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪರೀಕ್ಷಾ ಕೇಂದ್ರಗಳು ಮತ್ತು ಕರ್ತವ್ಯದಲ್ಲಿರುವ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಿದೆ. ಈ ವರ್ಷ 1.19 ಲಕ್ಷ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಕಳೆದ ವರ್ಷದಲ್ಲಿ 80,000 ಮಂದಿಯನ್ನು ನಿಯೋಜಿಸಲಾಗಿತ್ತು. 2020 ರಲ್ಲಿ 3,310 ಆಗಿದ್ದ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 4,885 ಕ್ಕೆ ಹೆಚ್ಚಿಸಲಾಗಿದೆ. ಪರೀಕ್ಷಾ ಕೊಠಡಿಗಳನ್ನು ಸಹ ಕಳೆದ ವರ್ಷ 48,000 ದಿಂದ 73,064 ಕ್ಕೆ ಹೆಚ್ಚಿಸಲಾಗಿದೆ.

ಒಂದು ತರಗತಿಯಲ್ಲಿ 12 ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ, ಒಂದು ಬೆಂಚ್‌ನಲ್ಲಿ ಒಬ್ಬರು ಮಾತ್ರ ಕುಳಿತುಕೊಳ್ಳುತ್ತಾರೆ. ಕೆಮ್ಮು, ಶೀತ, ಜ್ವರ ಲಕ್ಷಣಗಳಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ನಡೆಸಲು ಅವಕಾಶ ನೀಡಲಾಗುವುದು ಎಂದು ಕೆಎಸ್‌ಇಇಬಿ (KSEEB) ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್‌ಗಳು ಮತ್ತು ಪಲ್ಸ್ ಆಕ್ಸಿಮೀಟರ್‌ಗಳನ್ನು ಹೊಂದಿದ ಆರೋಗ್ಯ ತಪಾಸಣೆ ಕೌಂಟರ್ ಅನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ- BS Yediyurappa: ‘ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ’

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮತ್ತು ಕೋವಿಡ್ ಪರಿಸ್ಥಿತಿ:
ಪ್ರಸ್ತುತ ಕೋವಿಡ್ ಪರಿಸ್ಥಿತಿಯನ್ನು ಪರಿಗಣಿಸಿ ಮಕ್ಕಳಿಗೆ ಪರೀಕ್ಷಾ ಕೇಂದ್ರಗಳನ್ನು ತಲುಪಲು ಸರ್ಕಾರವು ಸಾರಿಗೆ ವ್ಯವಸ್ಥೆ ಮಾಡಿದೆ. "ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಮ್ಮ ಪ್ರವೇಶ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಮಕ್ಕಳಿಗೆ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡುವ ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News