Weather Update: ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ, ಈ ಭಾಗಗಳಲ್ಲಿ ಹೈ ಅಲರ್ಟ್

ಇಂದಿನಿಂದ ಆಗಸ್ಟ್ 12ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Written by - Zee Kannada News Desk | Last Updated : Aug 10, 2021, 08:19 AM IST
  • ರಾಜ್ಯಾದ್ಯಂತ ಇಂದಿನಿಂದ ಆಗಸ್ಟ್ 12ರವರೆಗೆ ಮಳೆ ಮುನ್ಸೂಚನೆ
  • ಕರ್ನಾಟಕದ ಕರಾವಳಿ, ಕೊಡಗು, ಮಲೆನಾಡು ಭಾಗಗಳಲ್ಲಿ ಮುಂದಿನ ಮೂರು ದಿನಗಳವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ
  • ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್
Weather Update: ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ, ಈ ಭಾಗಗಳಲ್ಲಿ ಹೈ ಅಲರ್ಟ್ title=
Representational Image

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಆಗಸ್ಟ್ 12ರವರೆಗೆ ಮಳೆಯಾಗಲಿದ್ದು ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. 

ಕರ್ನಾಟಕದ ಕರಾವಳಿ, ಕೊಡಗು, ಮಲೆನಾಡು ಭಾಗಗಳಲ್ಲಿ ಮುಂದಿನ ಮೂರು ದಿನಗಳವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರ ವರುಣನ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. 

ಇದನ್ನೂ ಓದಿ- ಬುಡ ಕುಸಿಯುವ ಮುನ್ನ ಎಚ್ಚರವಹಿಸಿ ಸಿದ್ದರಾಮಯ್ಯ: ಬಿಜೆಪಿ ವ್ಯಂಗ್ಯ

ಈ ಮಧ್ಯೆ, ಕಳೆದ ವಾರಾಂತ್ಯದಲ್ಲಿ ಭಾರೀ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಈ ವಾರವೂ ವರುಣನ (Rain) ಅಬ್ಬರ ಮುಂದುವರೆಯುವ ಸಾಧ್ಯತೆಯಿದ್ದು ಈ ಭಾಗಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ-  ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಇದಲ್ಲದೆ ಚಾಮರಾಜನಗರ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News