ಮೈಸೂರಿನಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವೆ ಸಂಘರ್ಷ; ಲಾಠಿ ಚಾರ್ಜ್

ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿ ನಡೆಸುವ ವಿಚಾರವಾಗಿ ಸಂಘರ್ಷ ಏರ್ಪಟ್ಟಿದ್ದು, ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. 

Last Updated : Apr 20, 2018, 02:05 PM IST
ಮೈಸೂರಿನಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವೆ ಸಂಘರ್ಷ; ಲಾಠಿ ಚಾರ್ಜ್ title=

ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅರಮೆನೆ ಮುಂಭಾಗದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿ ನಡೆಸುವ ವಿಚಾರವಾಗಿ ಸಂಘರ್ಷ ಏರ್ಪಟ್ಟಿದ್ದು, ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. 

ಇಂದು ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭೆ ಚುನಾವಣೆಯ ಹೈ ಓಲ್ಟೆಜ್ ಕ್ಷೇತ್ರ ಎಂದೇ ಹೇಳಲಾಗುತ್ತಿರುವ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಇಬ್ಬರೂ ಇಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ಕಾರ್ಯಾಕರ್ತರು ಮೆರವಣಿಗೆ ಹಮ್ಮಿಕೊಂಡಿದ್ದರು. 

ಚಾಮುಂಡೇಶ್ವರಿ ಕ್ಷೇತ್ರ : ಇಂದು ಜಿ.ಟಿ.ದೇವೇಗೌಡ ನಾಮಪತ್ರ ಸಲ್ಲಿಕೆ

ಈ ಸಂದರ್ಭದಲ್ಲಿ ಅರಮನೆ ಮುಂಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ. ಹೀಗಾಗಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. 

Trending News