ಏಕದಿನ ಮಾದರಿಯಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿಗಳನ್ನು ಹೊಂದಿರುವ ಭಾರತದ ಆಲ್ ರೌಂಡರ್ ಸ್ಟುವರ್ಟ್ ಬಿನ್ನಿ ಸೋಮವಾರ ಪ್ರಥಮ ದರ್ಜೆ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 37 ರ ಹರೆಯದ ಬಿನ್ನಿ ತನ್ನ ವೃತ್ತಿಜೀವನವನ್ನು ಕರ್ನಾಟಕದಲ್ಲಿ ಆರಂಭಿಸಿದರು ಮತ್ತು ಆರು ಟೆಸ್ಟ್, 14 ಏಕದಿನ ಮತ್ತು ಮೂರು ಟ್ವೆಂಟಿ -20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
37 ವರ್ಷದ ಸ್ಟುವರ್ಟ್ ಬಿನ್ನಿ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟಿ 20 ಪಂದ್ಯದಲ್ಲಿ 6 ಎಸೆತಗಳಲ್ಲಿ 5 ಸಿಕ್ಸರ್ ಬಾರಿಸಿ ದಾಖಲೆ ನಿರ್ಮಿಸಿದರು.
ಸ್ಟುವರ್ಟ್ ಬಿನ್ನಿ 2014 ರಲ್ಲಿ ಇಂಗ್ಲೆಂಡ್ ವಿರುದ್ಧ ಮತ್ತು 2014 ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು.
ಸ್ಟುವರ್ಟ್ ಬಿನ್ನಿ ಎಲ್ಲಾ ರೀತಿಯ ಕ್ರಿಕೆಟ್ ಗೆ ವಿದಾಯ ಹೇಳುತ್ತಿದ್ದಂತೆ, ಅವರ ಕ್ರಿಕೆಟ್ ನಿರೂಪಕಿ ಪತ್ನಿ ಮಾಯಂತಿ ಲ್ಯಾಂಗರ್ ತನ್ನ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಅವರ ಚಿತ್ರಗಳನ್ನು ಹಂಚಿಕೊಂಡರು.
17 ಜೂನ್ 2014 ರಂದು, ಸ್ಟುವರ್ಟ್ ಬಿನ್ನಿ ಬಾಂಗ್ಲಾದೇಶ ವಿರುದ್ಧ ಮಿರ್ಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಕೇವಲ 4 ರನ್ ನೀಡಿ 6 ವಿಕೆಟ್ ಪಡೆದರು. ಇದು ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾದ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.