ಬೆಂಗಳೂರು: ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗೆದ್ದರೆ ಮುಂದಿನ ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಹೈಕಮಾಂಡ್ ಮಾಡಲಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ,ಸಿದ್ದರಾಮಯ್ಯ ಅವರೇ ಸ್ವಯಂ ಆಗಿ ಮುಖ್ಯಮಂತ್ರಿಯಾಗಿ ಆಯ್ಕೆ ಆಗುವುದಿಲ್ಲ. ಬದಲಾಗಿ ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಹೈಕಮಾಂಡ್ ಚರ್ಚೆ ನಡೆಸಿ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತದೆ ಎಂದು ತಿಳಿಸಿದರು. ಇನ್ನು ಮುಂದುವರೆದು ಮಾತನಾಡಿದ ಅವರು ಸಿದ್ದರಾಮಯ್ಯ ನಾಯಕತ್ವದಲ್ಲಿ ರಾಜ್ಯ ಚುನಾವಣೆ ಎದುರಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸುದ್ದಿಗಾರರು ಒಂದು ವೇಳೆ ನೀವೇ ಮುಂದಿನ ಮುಖ್ಯಮಂತ್ರಿ ಎಂದು ಹೈಕಮಾಂಡ್ ತಿರ್ಮಾನಿಸಿದರೆ ಏನೂ ಹೇಳುತ್ತೀರೀ ಎನ್ನುವ ಪತ್ರಕರ್ತರ ಪ್ರಶ್ನೆಗೆ ಚುನಾವಣೆ ಸಂದರ್ಭದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿಸಬೇಡಿ ಎಂದು ವಿನಂತಿಸಿಕೊಂಡರು.