Thackeray to Thalaivii: ಬಾಲಿವುಡ್ ನಿರ್ಮಿಸಿದ ಟಾಪ್ 5 ರಾಜಕೀಯ ಜೀವನಾಧರಿತ ಚಿತ್ರಗಳು

ಬಾಲಿವುಡ್ ಚಿತ್ರ ನಿರ್ಮಾಪಕರು ಅನೇಕ ರಾಜಕೀಯ ಜೀವನಾಧರಿತ ಸಿನಿಮಾಗಳನ್ನು ತೆರೆಮೇಲೆ ತಂದಿದ್ದಾರೆ.

  • Sep 08, 2021, 12:51 PM IST

ಬಾಲಿವುಡ್ ಚಿತ್ರ ನಿರ್ಮಾಪಕರು ಅನೇಕ ರಾಜಕೀಯ ಜೀವನಾಧರಿತ ಸಿನಿಮಾಗಳನ್ನು ತೆರೆಮೇಲೆ ತಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಸೇರಿದಂತೆ ಅನೇಕ ರಾಜಕೀಯ ಗಣ್ಯರ ಜೀವನಾಧರಿತ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈ ಪೈಕಿ ಕೆಲವು ಸಿನಿಮಾಗಳು ಬಾಕ್ಸಾಫೀಸ್ ನಲ್ಲಿ ಸದ್ದು ಮಾಡಿದ್ದರೆ, ಇನ್ನು ಕೆಲವು ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿ ಸಂಪೂರ್ಣವಾಗಿ ನೆಲಕಚ್ಚಿವೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಮಹಾರಾಷ್ಟ್ರದ ಮಹಾನ್ ರಾಜಕಾರಣಿ, ಶಿವಸೇನಾ ಸಂಸ್ಥಾಪಕ ಅಧ್ಯಕ್ಷ ಬಾಳಾಸಾಹೇಬ್ ಠಾಕ್ರೆ ಅವರ ಜೀವನಾಧಾರಿತ ಚಿತ್ರವನ್ನು ತೆರೆಮೇಲೆ ತರಲಾಗಿತ್ತು. ‘ಠಾಕ್ರೆ’ ಹೆಸರಿನ ಈ ಚಿತ್ರಕ್ಕೆ ಅಭಿಜಿತ್ ಪನ್ಸೆ ಆಕ್ಷನ್ ಕಟ್ ಹೇಳಿದ್ದರು. ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಠಾಕ್ರೆ ಪಾತ್ರದಲ್ಲಿಅದ್ಭುತವಾಗಿ ನಟಿಸಿದ್ದರು.

2 /5

2004ರಿಂದ 2008ರವರೆಗೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬಾರು ಪುಸ್ತಕವನ್ನಾಧರಿಸಿ ‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ (ಆಕಸ್ಮಿಕ ಪ್ರಧಾನಿ) ಸಿನಿಮಾವನ್ನು ತೆರೆಮೇಲೆ ತರಲಾಗಿತ್ತು. ವಿಜಯ್ ಗುಟ್ಟೆ ನಿರ್ದೇಶನದ ಈ ಚಿತ್ರದಲ್ಲಿ ಹಿರಿಯ ನಟ ಅನುಪಮ್ ಖೇರ್ ಅವರು ಡಾ.ಮನಮೋಹನ್ ಸಿಂಗ್ ಪಾತ್ರದಲ್ಲಿ ನಟಿಸಿದ್ದರು.

3 /5

2019ರ ಮಾರ್ಚ್‌ನಲ್ಲಿ ‘ಪಿಎಂ ನರೇಂದ್ರ ಮೋದಿ’ ಸಿನಿಮಾ ಬಿಡುಗಡೆ ಆಗಿತ್ತು. ಪ್ರಧಾನಿ ಮೋದಿಯವರ ಬಯೋಪಿಕ್‌ ಆಗಿ ಮೂಡಿಬಂದ ಈ ಚಿತ್ರವನ್ನು ಖ್ಯಾತ ನಿರ್ದೇಶಕ ಓಮಂಗ್‌ ಕುಮಾರ್‌ ನಿರ್ದೇಶಿಸಿದ್ದರು. ಮೋದಿ ಪಾತ್ರವನ್ನು ವಿವೇಕ್‌ ಓಬೆರಾಯ್‌ ನಿಭಾಯಿಸಿದ್ದರು.  

4 /5

ಖುಷ್ಬೂ ರಾಂಕಾ ಮತ್ತು ವಿನಯ್ ಶುಕ್ಲಾ ನಿರ್ಮಿಸಿದ ಈ ಸಾಕ್ಷ್ಯಚಿತ್ರವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜೀವನ ಮತ್ತು ಹೋರಾಟವನ್ನು ಒಳಗೊಂಡಿದೆ.   

5 /5

ಎ.ಎಲ್.ವಿಜಯ್ ನಿರ್ದೇಶನದ ‘ತೈಲವಿ’ ಚಿತ್ರದಲ್ಲಿ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಅವರು ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಪಾತ್ರದಲ್ಲಿ ಅಭಿನಯಿಸಿದ್ದಾರೆ.