Breaking News: ಭೂಪೇಂದ್ರ ಪಟೇಲ್ ಗುಜರಾತ್ ನ ನೂತನ ಸಿಎಂ ಆಗಿ ಆಯ್ಕೆ

2 ಅವಧಿಯಲ್ಲಿ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸಿರುವ ವಿಜಯ್‌ ರೂಪಾಣಿ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  

Written by - Puttaraj K Alur | Last Updated : Sep 12, 2021, 05:05 PM IST
  • ಗುಜರಾತ್‌ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ
  • ಗುಜರಾತ್‌ನ ಬಿಎಲ್ ಪಿ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ
  • ನಾಳೆಯೇ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸಾಧ್ಯತೆ
Breaking News: ಭೂಪೇಂದ್ರ ಪಟೇಲ್ ಗುಜರಾತ್ ನ ನೂತನ ಸಿಎಂ ಆಗಿ ಆಯ್ಕೆ title=
ಭೂಪೆಂದ್ರ ಪಟೇಲ್ ಗುಜರಾತ್ ನ ನೂತನ ಸಿಎಂ ಆಗಿ ಆಯ್ಕೆ

ನವದೆಹಲಿ: ಗುಜರಾತ್‌ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್(Bhupendra Patel)ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಗುಜರಾತ್‌ನ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ. ಘಾಟ್ ಲೋಡಿಯಾ ಕ್ಷೇತ್ರದ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಪಾಟೀದಾರ್ ಸಮುದಾಯದ ನಾಯಕರಾಗಿದ್ದಾರೆ.

ಗುಜರಾತ್‌ನ ನೂತನ ಸಿಎಂ(Gujarat New CM) ಆಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ ಅವರು ನಾಳೆಯೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 2017ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್​ ಪಟೇಲ್​ ವಿರುದ್ಧ ಬರೋಬ್ಬರಿ 1.17 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ದಾಖಲೆ ಅವರ ಹೆಸರಿನಲ್ಲಿದೆ.

ಇದನ್ನೂ ಓದಿ: ಎಎಪಿಯ ರಾಷ್ಟ್ರೀಯ ಸಂಚಾಲಕರಾಗಿ ಅವಿರೋಧವಾಗಿ ಅರವಿಂದ ಕೇಜ್ರಿವಾಲ್ ಮರು ಆಯ್ಕೆ

ನಿನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವಿಜಯ್ ರೂಪಾನಿ(Vijay Rupani)ಯವರು ಭೂಪೇಂದ್ರ ಪಟೇಲ್ ಅವರ ಹೆಸರನ್ನು ಸೂಚಿಸಿದ್ದರು. ಗುಜರಾತ್‌ನ ಗಾಂಧಿನಗರದ ಬಿಜೆಪಿ ಕಾರ್ಯಾಲಯ ‘ಕಮಲಂ’ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2022ರ ಡಿಸೆಂಬರ್ ನಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ನೂತನ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ 15 ತಿಂಗಳು ಅಧಿಕಾರ ನಡೆಸುವ ಅವಕಾಶವಿದೆ. 

ಗುಜರಾತ್ ಮುಖ್ಯಮಂತ್ರಿ(Gujarat Chief Minister)ಸ್ಥಾನಕ್ಕೆ ವಿಜಯ್ ರೂಪಾಣಿ ರಾಜೀನಾಮೆ ಸಲ್ಲಿಸಿದ ಬಳಿಕ ಬಿಜೆಪಿ ಪಾಳಯದಲ್ಲಿನೂತನ ಸಿಎಂ ಆಯ್ಕೆ ಕಸರತ್ತು ಜೋರಾಗಿತ್ತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲು ಗಾಂಧಿನಗರಕ್ಕೆ ಬಂದಿದ್ದ ಕೇಂದ್ರ ಸಚಿವ ಮನ್‌ಸುಖ್ ಮಾಂಡವೀಯ ಗುಜರಾತ್‌ನ ನೂತನ ಸಿಎಂ ಆಗುತ್ತಾರೆಂಬ ಊಹಾಪೋಹಗಳು ಎದ್ದಿದ್ದವು. ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಬಲ ಪಾಟೀದಾರ್ ಸಮುದಾಯದವರನ್ನೇ ಸಿಎಂ ಮಾಡಬೇಕೆಂಬುದು ಬಿಜೆಪಿ ಹೈಕಮಾಂಡ್ ನ ಲೆಕ್ಕಾಚಾರವಾಗಿತ್ತು. ಹೀಗಾಗಿ ಪಾಟೀದಾರ್ ಸಮುದಾಯಕ್ಕೆ ಸೇರಿದ ಮನ್‌ಸುಖ್‌ ಮಾಂಡವೀಯ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು.

ಇದನ್ನೂ ಓದಿ: NEET-UG 2021: ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ವಿದ್ಯಾರ್ಥಿ ಆತ್ಮಹತ್ಯೆ..!

ಮಾಂಡವೀಯ ಮಾತ್ರವಲ್ಲದೆ ಗುಜರಾತ್ ಸಿಎಂ ರೇಸ್ ನಲ್ಲಿ ಬಿಜೆಪಿ ಹಿರಿಯ ನಾಯಕ ಪ್ರಫುಲ್‌ ಖೋಡಾ ಪಟೇಲ್‌, ಕೇಂದ್ರ ಸಚಿವ ಪುರುಷೋತ್ತಮ ರೂಪಾಲ, ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್‌, ಕೃಷಿ ಸಚಿವ ಆರ್‌.ಸಿ.ಫಾಲ್ದು ಅವರ ಹೆಸರುಗಳೂ ಕೇಳಿಬಂದಿದ್ದವು. ಕೇಂದ್ರದ ವೀಕ್ಷಕರಾಗಿರುವ ನರೇಂದ್ರ ಸಿಂಗ್ ತೋಮರ್ ಮತ್ತು ಪ್ರಲ್ಹಾದ್ ಜೋಶಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಈ ಬಗ್ಗೆ ಚರ್ಚಿಸಿದ್ದರು. ಅಚ್ಚರಿಯೆಂಬಂತೆ ಭೂಪೇಂದ್ರ ಪಟೇಲ್​ ಅವರು ಆಯ್ಕೆಯಾಗಿದ್ದಾರೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News