ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಬಾಬುಲ್ ಸುಪ್ರಿಯೋ ಔಪಚಾರಿಕವಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಪುನಾರಚನೆಯ ನಂತರ ಸುಪ್ರಿಯೋ ಬಿಜೆಪಿ ತೊರೆದಿದ್ದರು. ಕೇಂದ್ರ ಸ್ಥಾನದಿಂದ ಕೆಳಗಿಳಿಯುವ ಸಮಯದಲ್ಲಿ, ಸುಪ್ರಿಯೋ ಅವರು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಮತ್ತು ರಾಜಕೀಯವನ್ನು ತೊರೆಯುವುದಾಗಿ ಹೇಳಿದ್ದರು.
ಇದನ್ನೂ ಓದಿ: Babul Supriyo : ರಾಜಕೀಯಕ್ಕೆ ಗುಡ್ ಬೈ ಹೇಳಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬಿಜೆಪಿ MP
'ಇಂದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಆರ್ಎಸ್ ಎಂಪಿ ಡೆರೆಕ್ ಒ'ಬ್ರೇನ್ ಅವರ ಸಮ್ಮುಖದಲ್ಲಿ, ಮಾಜಿ ಕೇಂದ್ರ ಸಚಿವ ಮತ್ತು ಹಾಲಿ ಸಂಸದ ಬಾಬುಲ್ ಸುಪ್ರಿಯೋ (Babul Supriyo) ತೃಣಮೂಲ ಕುಟುಂಬಕ್ಕೆ ಸೇರಿಕೊಂಡರು" ಎಂದು ಪಕ್ಷವು ಟ್ವೀಟ್ ಮಾಡಿದೆ.
Today, in the presence of National General Secretary @abhishekaitc and RS MP @derekobrienmp, former Union Minister and sitting MP @SuPriyoBabul joined the Trinamool family.
We take this opportunity to extend a very warm welcome to him! pic.twitter.com/6OEeEz5OGj
— All India Trinamool Congress (@AITCofficial) September 18, 2021
ಕಳೆದ ತಿಂಗಳು, ಸುಪ್ರಿಯೋ ಅವರು ರಾಜಕೀಯವನ್ನು ತ್ಯಜಿಸುವುದಾಗಿ ಘೋಷಿಸಿದ್ದರು, ಆದರೆ ನಂತರ ಅವರು ಸಕ್ರಿಯ ರಾಜಕಾರಣದ ಭಾಗವಾಗುವುದಿಲ್ಲ ಎಂದು ಹೇಳಿದ್ದರು.
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಪ್ರಿಯೋ ಸಂಸದರಾಗಿ ತಮ್ಮ ಸಾಂವಿಧಾನಿಕ ಜವಾಬ್ದಾರಿಗಳನ್ನು ನಿರ್ವಹಿಸುವುದನ್ನು ಮುಂದುವರೆಸುವುದಾಗಿ ಹೇಳಿದ್ದರು.
ಇದನ್ನೂ ಓದಿ: ಬಾಂದ್ರಾ-ಕುರ್ಲಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ, ಅಪಘಾತದಲ್ಲಿ 14 ಕಾರ್ಮಿಕರಿಗೆ ಗಾಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.