ನವದೆಹಲಿ: ಬಂಧನದ ಬಳಿಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪೊರಕೆ ಹಿಡಿದು ಕಸ ಗುಡಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಉತ್ತರಪ್ರದೇಶದ ಲಖೀಂಪುರ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ(Lakhimpur Violence) ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡುತ್ತಿದ್ದ ಪ್ರಿಯಾಂಕಾ(Priyanka Gandhi)ರನ್ನು ಅಡ್ಡಗಟ್ಟಿದ್ದ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಯುಪಿಯ ಸೀತಾಪುರದ ಪಿಎಸಿ ಅತಿಥಿ ಗೃಹದಲ್ಲಿ ಇರಿಸಲಾಗಿತ್ತು. ಈ ವೇಳೆ ತಾವು ಇದ್ದ ಕೊಠಡಿಯನ್ನು ಪ್ರಿಯಾಂಕಾ ಗಾಂಧಿ ಪೊರಕೆ ಹಿಡಿದು ಕಸ ಗುಡಿಸಿದ್ದಾರೆ.
True grit & courage against a brutal state.
Smt. @priyankagandhi Ji arrested in order to go to Lakhimpur Kheri, is on fast. She is seen sweeping her room.#लखीमपुर_किसान_नरसंहार#PriyankaGandhi pic.twitter.com/xZ6FueLukk
— Neeraj Kundan (@Neerajkundan) October 4, 2021
ಲಖೀಂಪುರ ಜಿಲ್ಲೆಯಲ್ಲಿ ಸಂಭವಿಸಿರುವ ಹಿಂಸಾತ್ಮಕ ಘರ್ಷಣೆ(Lakhimpur Kheri Violence)ಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಭಟನಾ ಸ್ಥಳಕ್ಕೆ ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡಲು ಅನುಮತಿಸುವುದಿಲ್ಲ ಎಂದು ಘೋಷಿಸಲಾಗಿತ್ತು. ಈ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಲು ತೆರಳಿದ್ದ ಪ್ರಿಯಾಂಕಾ ಗಾಂಧಿಯವರನ್ನು ಮಧ್ಯದಲ್ಲಿಯೇ ತಡೆದ ಪೊಲೀಸರು ಬಂಧಿದ್ದಾರೆ. ಖಾಕಿ ವಶದಲ್ಲಿರುವ ಪ್ರಿಯಾಂಕಾ ಗಾಂಧಿಯವರಿಗೆ ಅತಿಥಿ ಗೃಹ(Guest House)ದಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ತಾವು ವಾಸವಿದ್ದ ಕೊಠಡಿಯಲ್ಲಿ ಧೂಳು ಇರುವುದನ್ನು ಗಮನಿಸಿದ ಪ್ರಿಯಾಂಕಾ ಸ್ವತಃ ತಾವೇ ಪೊರಕೆ ಹಿಡಿದು ಸ್ವಚ್ಛಗೊಳಿಸಿದ್ದಾರೆ.
ಇದನ್ನೂ ಓದಿ: ನಿಮಗೂ LPG ಸಬ್ಸಿಡಿ ಸಿಗುತ್ತಿಲ್ಲವೇ ? ಇಂದೇ ಈ ಕೆಲಸ ಮಾಡಿ, ತಕ್ಷಣ ನಿಮ್ಮ ಖಾತೆಗೆ ಹಣ ಬರುತ್ತದೆ
ಬಂಧನದ ವೇಳೆ ಪ್ರಿಯಾಂಕಾ ಪೊಲೀಸರೊಂದಿಗೆ ಮಾತನಾಡಿದ್ದ ವಿಡಿಯೋವೊಂದು ವೈರಲ್(Video Viral) ಆಗಿತ್ತು. ಪೊಲೀಸರು ನನ್ನೊಂದಿಗೆ ತಪ್ಪಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದ ಅವರು ಬಂಧನಕ್ಕೆ ವಾರಂಟ್ ನೀಡಬೇಕೆಂದು ಒತ್ತಾಯಿಸಿದ್ದರು. ‘ನೀವು ಕೊಂದ ಜನರಿಗಿಂತ ನಾನು ಮುಖ್ಯವಲ್ಲ. ನೀವು ಸರ್ಕಾರವನ್ನು ರಕ್ಷಿಸುತ್ತಿದ್ದೀರಿ. ನೀವು ನನಗೆ ಲೀಗಲ್ ವಾರಂಟ್ ನೀಡಿ, ಇಲ್ಲವಾದರೆ ನಾನು ಇಲ್ಲಿಂದ ಕದಲುವುದಿಲ್ಲ. ನೀವು ನನ್ನನ್ನು ಏನೂ ಮಾಡುವುದಕ್ಕೆ ಆಗುವುದಿಲ್ಲವೆಂದು’ ಪ್ರಿಯಾಂಕಾ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು.
ಲಕ್ನೋದಿಂದ 90 ಕಿಲೋಮೀಟರ್ ದೂರದಲ್ಲಿರುವ ಸೀತಾಪುರದಲ್ಲಿ ಪ್ರಿಯಾಂಕಾರನ್ನು ಬಂಧಿಸಲಾಗಿತ್ತು. ಇದರ ವಿಡಿಯೋ ವೈರಲ್ ಆದ ಬಳಿಕ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ಕೂಡ ವೈರಲ್ ಆಗುತ್ತಿದೆ. ಕೇಂದ್ರದ ಕೃಷಿ ಕಾಯ್ದೆ(Farm Bill) ವಿರೋಧಿಸಿ ರೈತರು ಪ್ರತಿಭಟನೆ ನಡೆಸುದ್ದ ವೇಳೆ ಕಾರು ತಡೆಯಲು ಮುಂದಾಗಿದ್ದರು. ಈ ವೇಳೆ 2 ಕಾರುಗಳು ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಈ ಘಟನೆ ಬಳಿಕ ಸಂಭವಿಸಿದ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Punjab Politics Latest Update: ಪಂಜಾಬ್ ಕಾಂಗ್ರೆಸ್ ಗೆ ಬಿಗ್ ಶಾಕ್!, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.