Amit Shah: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 CRPF ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಗೃಹ ಸಚಿವ ಅಮಿತ್ ಶಾ

Amit Shah's Tribute to Martyrs of Pulwama terror attack: ಶ್ರೀನಗರದಲ್ಲಿ ಮಂಗಳವಾರ ಬೆಳಗ್ಗೆ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಯೋಧರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರದ್ಧಾಂಜಲಿ ಸಲ್ಲಿಸಿದರು.

Written by - Zee Kannada News Desk | Last Updated : Oct 26, 2021, 09:16 AM IST
  • ಪುಲ್ವಾಮಾದಲ್ಲಿರುವ ಸಿಆರ್‌ಪಿಎಫ್ ಶಿಬಿರಕ್ಕೆ ಅಮಿತ್ ಶಾ ಭೇಟಿ
  • ಅಮಿತ್ ಶಾ ನಿನ್ನೆ ರಾತ್ರಿ ಸಿಆರ್‌ಪಿಎಫ್ ಶಿಬಿರದಲ್ಲಿ ತಂಗಿದ್ದರು
  • ಸಿಆರ್‌ಪಿಎಫ್ ಯೋಧರೊಂದಿಗೆ ಅಮಿತ್ ಶಾ ಭೋಜನ ಸವಿದರು
Amit Shah: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 CRPF ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಗೃಹ ಸಚಿವ ಅಮಿತ್ ಶಾ title=
Amit Shah Kashmir Visit (Image courtesy: ANI)

Amit Shah's Tribute to Martyrs of Pulwama terror attack: 2019 ರಲ್ಲಿ ಪುಲ್ವಾಮಾದಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಜವಾನರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು. ಸೈನಿಕರ ಅತ್ಯುನ್ನತ ತ್ಯಾಗವನ್ನು ನಾವು ಮರೆಯಲು ಸಾಧ್ಯವಿಲ್ಲ. ನಾನು ಪಡೆಯ ಎಲ್ಲಾ ಸೈನಿಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ದೊಡ್ಡ ಕೆಲಸ ಮಾಡಿದ್ದೀರಿ ಎಂದು ಹೇಳಿದರು.

ಪ್ರಸ್ತುತ ಕಾಶ್ಮೀರ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ (Amit Shah), ಪಾಕಿಸ್ತಾನದ ಜೊತೆ ಮಾತನಾಡುವ ಬದಲು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಜನರೊಂದಿಗೆ ಮಾತನಾಡಲು ಇಷ್ಟಪಡುತ್ತೇನೆ, ನನ್ನ ಮನಸ್ಸಿನ ಬಗ್ಗೆ ಮಾತನಾಡಲು ಇಷ್ಟಪಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ- ಏಮ್ಸ್ ಗೆ ದಾಖಲಾದ ಬಂಗಾಳದ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್

ಗಮನಾರ್ಹ ಸಂಗತಿ ಎಂದರೆ, ಶ್ರೀನಗರದಲ್ಲಿ ತಮ್ಮ 38 ನಿಮಿಷಗಳ ಸುದೀರ್ಘ ಭಾಷಣವನ್ನು ಪ್ರಾರಂಭಿಸುವ ಮೊದಲು ಗೃಹ ಸಚಿವ ಅಮಿತ್ ಷಾ (Home Minister Amit Shah) ವೇದಿಕೆಯಲ್ಲಿ ಅಳವಡಿಸಲಾದ ಬುಲೆಟ್ ಪ್ರೂಫ್ ಶೀಲ್ಡ್ ಅನ್ನು ತೆಗೆದುಹಾಕಿದರು. ಈ ಸಮಯದಲ್ಲಿ, ಅವರು ಜನರೊಂದಿಗೆ "ಮನ್ ಕಿ ಬಾತ್" ಮಾಡಲು ಇಷ್ಟಪಡುವುದಾಗಿ ತಿಳಿಸಿದರು. 

ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, 370 ನೇ ವಿಧಿಯನ್ನು ರದ್ದುಪಡಿಸುವ ಏಕೈಕ ಉದ್ದೇಶವು ಕಾಶ್ಮೀರ-ಜಮ್ಮುವನ್ನು ಅಭಿವೃದ್ಧಿಯ ಪಥದಲ್ಲಿ ತರುವುದಾಗಿದೆ. 2024 ರ ವೇಳೆಗೆ ನಮ್ಮ ಪ್ರಯತ್ನದ ಫಲವನ್ನು ಜನರು ನೋಡಲಾರಂಭಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ- ' ಬಿಹಾರದ ಜನರು ಇನ್ನೂ 'ಜಂಗಲ್ ರಾಜ್' ನ್ನು ಮರೆತಿಲ್ಲ- ನಿತೀಶ್ ಕುಮಾರ್

ಸಿಆರ್‌ಪಿಎಫ್ ಶಿಬಿರದಲ್ಲಿ ಸೈನಿಕರೊಂದಿಗೆ ಊಟ ಸವಿದ ಕೇಂದ್ರ ಗೃಹ ಸಚಿವರು:
ಶ್ರೀನಗರದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದ ನಂತರ, ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಿಆರ್‌ಪಿಎಫ್ ಸಿಬ್ಬಂದಿಗಳ ನಡುವೆ ಪುಲ್ವಾಮಾ ಜಿಲ್ಲೆಯ ಲೆಥ್‌ಪೋರಾ ತಲುಪಿ ಅಲ್ಲಿ ಅವರೊಂದಿಗೆ ಊಟ ಮಾಡಿದರು.

ಭಯೋತ್ಪಾದಕ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಇಳಿಮುಖ:
2014ರಿಂದ 2021ರ ನಡುವೆ ಭಯೋತ್ಪಾದಕ ದಾಳಿಯಲ್ಲಿ ಯೋಧರ ಸಾವು ಮತ್ತು ಹುತಾತ್ಮರ ಸಂಖ್ಯೆ ಕಡಿಮೆಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. 2004 ಮತ್ತು 2014 ರ ನಡುವೆ, ಭಯೋತ್ಪಾದಕ ಘಟನೆಗಳಲ್ಲಿ ವಾರ್ಷಿಕವಾಗಿ 208 ನಾಗರಿಕರು ಕೊಲ್ಲಲ್ಪಟ್ಟರು, ಆದರೆ 2014 ಮತ್ತು 2021 ರ ನಡುವೆ ಈ ಅಂಕಿಅಂಶಗಳು ಕಡಿಮೆಯಾಗಿದೆ. ಈ ಸಮಯದಲ್ಲಿ, ವಾರ್ಷಿಕವಾಗಿ 60 ಸೈನಿಕರು ಹುತಾತ್ಮರಾಗಿದ್ದರು ಮತ್ತು ಸಾಮಾನ್ಯ ನಾಗರಿಕರ ಸಂಖ್ಯೆ 30 ಎಂದು ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News