ನವದೆಹಲಿ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು(ಅ.31) ಭಾರತ ಮತ್ತು ನ್ಯೂಜಿಲೆಂಡ್(India vs New Zealand) ತಂಡಗಳು ಮುಖಾಮುಖಿಯಾಗುತ್ತಿವೆ. T20 World Cup 2021ನಲ್ಲಿ ಉಭಯ ತಂಡಗಳಿಗೆ ಇದು ‘ಮಾಡು ಇಲ್ಲವೇ ಮಡಿ’ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೋ ಅವರ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲಿದೆ.
‘ಬಿ’ ಗುಂಪಿನ ಪೈಕಿ ಪಾಕಿಸ್ತಾನ ತಾನಾಡಿರುವ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಈಗಾಗಲೇ ಸೆಮಿಫೈನಲ್ ಟಿಕೆಟ್ ಖಾತರಿ ಮಾಡಿಕೊಂಡಿದೆ. ಪಾಕ್ ಎದುರು ಸೋಲು ಕಂಡಿರುವ ಕೀವಿಸ್ ಮತ್ತು ಟೀಂ ಇಂಡಿಯಾ(Team India) ಈ ನಿರ್ಣಾಯಕ ಪಂದ್ಯದಲ್ಲಿ ಗೆಲುವಿಗಾಗಿ ಎದುರು ನೋಡುತ್ತಿವೆ. ಈ ಪಂದ್ಯದಲ್ಲಿ ಸೋಲುವ ತಂಡವು ಬಹುತೇಕ ಟಿ-20 ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯವು ಬಹುಮಹತ್ವವನ್ನು ಪಡೆದುಕೊಂಡಿದೆ. ಯಾರಿಗೆ ವಿಜಯಲಕ್ಷ್ಮೀ ಒಲಿಯುತ್ತಾಳೆಂಬುದು ಕೂತುಹಲ ಮೂಡಿಸಿದೆ.
ಇದನ್ನೂ ಓದಿ: National Sports Awards: Neeraj Chopra ಸೇರಿದಂತೆ 11 ಆಟಗಾರರಿಗೆ ಖೇಲ್ ರತ್ನ, 35 ಆಟಗಾರರಿಗೆ ಅರ್ಜುನ ಪ್ರಶಸ್ತಿ
ಉಭಯ ತಂಡಗಳು ಕೂಡ ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿವೆ. ಹೀಗಾಗಿ ಭಾರತ ಮತ್ತು ನ್ಯೂಜಿಲೆಂಡ್(New Zealand) ನಡುವೆ ಭರ್ಜರಿ ಪೈಪೋಟಿ ನಡೆಯುವ ನಿರೀಕ್ಷೆ ಇದೆ. ಕೀವಿಸ್ ಪಡೆಯ ಮೇಲೆ ಸವಾರಿ ಮಾಡಲು ವಿರಾಟ್ ಕೊಹ್ಲಿ ತಂತ್ರ ರೂಪಿಸಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇಲ್ಲಿ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಲಿದೆ. ಒಂದು ವೇಳೆ ವಿರಾಟ್ ಕೊಹ್ಲಿ(Virat Kohli) ಟಾಸ್ ವಿಫಲವಾದರೆ, ಅನುಭವಿ ಬೌಲರುಗಳ ಅವಶ್ಯಕತೆಯಿದೆ. ಭಾರತ ತಂಡದಲ್ಲಿ (India Playing 11) ಬದಲಾವಣೆ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಪಾಕ್ ವಿರುದ್ಧ ಕಣಕ್ಕಿಳಿದ್ದ ಬಹುತೇಕ ಆಟಗಾರರು ಆಡಲಿದ್ದಾರೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನೆಟ್ಸ್ನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ್ದು, ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ಇದೆ. ಇದರಿಂದ ಶಾರ್ದೂಲ್ ಠಾಕೂರ್ಗೆ ಸ್ಥಾನ ಸಿಗುವುದು ಅನುಮಾನ. ಒಂದು ವೇಳೆ ಶಾರ್ದೂಲ್ಗೆ ಅವಕಾಶ ಸಿಕ್ಕರೆ ಭುವನೇಶ್ವರ್ ಕುಮಾರ್ ಅವರನ್ನು ಕೈಬಿಡಬಹುದು.
ಇನ್ನು ಸ್ಪಿನ್ನರ್ ಸ್ಥಾನದಲ್ಲಿ ವರುಣ್ ಚಕ್ರವರ್ತಿ(Varun Chakaravarthy)ಯನ್ನು ಕೈಬಿಟ್ಟರೆ ಆರ್.ಅಶ್ವಿನ್ ಗೆ ಚಾನ್ಸ್ ಸಿಗುವ ಸಾಧ್ಯತೆ ಇದೆ. ಗೆಲುವಿನ ಮೇಲೆ ಕಣ್ಣೀರಿಟ್ಟಿರುವ ಕೊಹ್ಲಿ ಪಡೆ ಕೀವಿಸ್ ಸೋಲಿಸಲು ಪ್ಲಾನ್ ಮಾಡುತ್ತಿದೆ. ಗೆಲುವು ಅನಿವಾರ್ಯವಾಗಿರುವ ಹಿನ್ನೆಲೆ ಈ ಪಂದ್ಯ ಭಾರೀ ಮಹತ್ವ ಪಡೆದುಕೊಂಡಿದೆ. ಕೀವಿಸ್ ಮತ್ತು ಟೀಂ ಇಂಡಿಯಾ ನಡುವಿನ ರೋಚಕ ಸೆಣಸಾಟವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ: IPL 2022 : ಕನ್ನಡಿಗ ಕೆಎಲ್ ರಾಹುಲ್ ಗೆ ಬಿಗ್ ಶಾಕ್ ನೀಡಿದ ಪಂಜಾಬ್ ತಂಡದ ಮಾಲೀಕ!
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ , ಕೆ.ಎಲ್.ರಾಹುಲ್ , ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ , ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್.ಅಶ್ವಿನ್ , ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ
ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಟಾಡ್ ಆಸ್ಟಲ್, ಮಾರ್ಕ್ ಚಾಪ್ಮನ್
T20 World Cup 2021 ಪಂದ್ಯ
ಭಾರತ vs ನ್ಯೂಜಿಲೆಂಡ್
ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ
ದಿನಾಂಕ: ಅಕ್ಟೋಬರ್ 31, ಭಾನುವಾರ
ಸಮಯ: ಸಂಜೆ 7.30ಕ್ಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ