ಅನಂತಪುರ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆ(Anantapur Accident)ಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿದ್ದು, 6 ಮಹಿಳೆಯರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಪಾಮಿಡಿ ಮತ್ತು ಮಿಡ್ತೂರಿನಲ್ಲಿ 10 ಕಿ.ಮೀ ಅಂತರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 44ರಲ್ಲಿಈ ದುರ್ಘಟನೆಗಳು ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಕರ್ನೂಲ್ನಿಂದ ಅನಂತಪುರ(Kurnool to Ananthapur)ಕ್ಕೆ ಮುಂಜಾನೆ 5.30ಕ್ಕೆ ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ದೊಡ್ಡ ಆಟೋರಿಕ್ಷಾಕ್ಕೆ ಪಾಮಿಡಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 44ರ ಜಂಕ್ಷನ್ನಲ್ಲಿ ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ 6 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಗರ್ಲದಿನ್ನೆ ಮಂಡಲದ ಕೊಪ್ಪಲಕೊಂಡ ಗ್ರಾಮದ ಶಂಕರಮ್ಮ (48), ನಾಗವೇಣಿ (35), ಚೌಡಮ್ಮ (35), ಸಾವಿತ್ರಿ (40), ಸುಬ್ಬಮ್ಮ (45) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗೂಟಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪಾಮಿಡಿ ವೃತ್ತ ನಿರೀಕ್ಷಕ ಈರಣ್ಣ ತಿಳಿಸಿದ್ದಾರೆ. ಆಟೋದಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: PM Kisan ಯೋಜನೆಯ 10ನೇ ಕಂತು ಬರಲಿದೆ ಈ ದಿನ : ಪೂರ್ಣಗೊಂಡಿವೆ ಸರ್ಕಾರದ ಸಿದ್ಧತೆಗಳು
ವೇಗವಾಗಿ ಬಂದ ಕಾರೊಂದು ಆಟೋಗೆ ಡಿಕ್ಕಿ(Car Hits Auto) ಹೊಡೆದಿದೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳು ನಜ್ಜುಗುಜ್ಜಾಗಿವೆ. ಅಪಘಾತಕ್ಕೆ ಕಾರಣವಾದ ವಾಹನ ಗುರುತಿಸಲು ಪೊಲೀಸ್ ಸಿಬ್ಬಂದಿ NH 44ನಲ್ಲಿನ ಎಲ್ಲಾ ಸಿಸಿಟಿವಿ ದೃಶ್ಯ(CCTV Footage)ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟವರು ಹತ್ತಿ ಕೀಳಲು ಹೊಲಕ್ಕೆ ಹೋಗುತ್ತಿದ್ದರು. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮತ್ತೊಂದು ಅಪಘಾತ ಪ್ರಕರಣದಲ್ಲಿ ಅನಂತಪುರ(Ananthapur)ದಿಂದ ಕರ್ನೂಲ್ ಗೆ ತೆರಳುತ್ತಿದ್ದ ಕರ್ನಾಟಕ ನೋಂದಣಿಯ ಕಾರು ಪೆದ್ದವಡ್ಗೂರು ಮಂಡಲದ ಮಿಡ್ತೂರು ಗ್ರಾಮದಲ್ಲಿ ಬೆಳಿಗ್ಗೆ 6.15ಕ್ಕೆ ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಯಾಕೋಬು (60)ಚಾಕಲಿ ನಾರಾಯಣಸ್ವಾಮಿ (62) ಎಂದು ಗುರುತಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೆದ್ದವಡಗೂರು ಸಬ್ ಇನ್ಸ್ ಪೆಕ್ಟರ್ ರಮೇಶ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ