ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟರ್ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದೆ.ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಕೂಡ ಹೆಲಿಕಾಪ್ಟರ್ನಲ್ಲಿದ್ದರು.
ತಮಿಳುನಾಡಿನ ಕೊಯಮತ್ತೂರು ಮತ್ತು ಸೂಲೂರು ನಡುವೆ ಅಪಘಾತಕ್ಕೀಡಾದ ಮಿ-ಸಿರೀಸ್ ಹೆಲಿಕಾಪ್ಟರ್ನಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಸಿಬ್ಬಂದಿ ಇದ್ದರು.
ಮಿ-ಸಿರೀಸ್ ಹೆಲಿಕಾಪ್ಟರ್ನಲ್ಲಿ ಸೇರಿ ಒಟ್ಟು 15 ಜನ ಇದ್ದು ಅದರಲ್ಲಿ 5 ಜನ ಮೃತರಾಗಿದ್ದಾರೆ ಮತ್ತು ಮೂರು ಜನ ಗಾಯಗೊಂಡಿದ್ದಾರೆ. ಸಧ್ಯ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಝೀ ನ್ಯೂಸ್ ಮೂಲಗಳ ಪ್ರಕಾರ, ಸಿಡಿಎಸ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಸ್ಥಿತಿ ಗಂಭೀರದ್ದೂ, ಚಿಕಿತ್ಸೆಗೆ ಪ್ರತಿಕ್ರಿಯಿಸುತ್ತಿದ್ದಾರೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶೀಘ್ರದಲ್ಲೇ ಸಂಸತ್ತಿನಲ್ಲಿ ಅಪಘಾತದ ಬಗ್ಗೆ ವಿವರಿಸಲಿದ್ದಾರೆ.
Military chopper crashes in Tamil Nadu. Senior officials were on board. More details awaited. pic.twitter.com/j3jXy66q6k
— ANI (@ANI) December 8, 2021
ವಾಯು ಸೇನೆ ಅಧಿಕೃತ ಟ್ವಿಟ್ಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಟ್ವೀಟ್ ನಲ್ಲಿ, ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟರ್ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಬರೆದುಕೊಂಡಿದೆ.
An IAF Mi-17V5 helicopter, with CDS Gen Bipin Rawat on board, met with an accident today near Coonoor, Tamil Nadu.
An Inquiry has been ordered to ascertain the cause of the accident.— Indian Air Force (@IAF_MCC) December 8, 2021
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ