Jammu And Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಿರ್ಭಯವಾಗಿ ಸುತ್ತಾಡುತ್ತಿದ್ದಾರೆ ಎಂಬಂತೆ ತೋರುತ್ತಿದೆ. ಇದೀಗ ಶ್ರೀನಗರದ (Srinagar)ಹೊರವಲಯದಲ್ಲಿರುವ ಜೆವಾನ್ (Jewan) ನಲ್ಲಿ ಪೊಲೀಸ್ ಬಸ್ (Police Vehicle) ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ ಮತ್ತು 14 ಪೊಲೀಸರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಘಟನೆಯ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ಜೆವಾನ್ ಪ್ರದೇಶದ ಪಂಥಾ ಚೌಕ್ನಲ್ಲಿ (Pantha Chowk) ಈ ದಾಳಿ ನಡೆದಿದೆ. ದಾಳಿಯ ನಂತರ ಪ್ರದೇಶವನ್ನು ಸುತ್ತುವರಿಯಲಾಗಿದೆ (Cordoned Off) ಮತ್ತು ಗಾಯಗೊಂಡ ಎಲ್ಲಾ ಪೊಲೀಸರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ದಾಳಿ ನಡೆಸಿದ ಉಗ್ರರ ಶೋಧಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ. ಮುಂಜಾನೆ, ಶ್ರೀನಗರದ ರುಗ್ರಾತ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ (Rugrat Encounter) ಇಬ್ಬರು ಭಯೋತ್ಪಾದಕರು ಹತರಾಗಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.
Terrorists fired upon a police vehicle near Zewan in Pantha Chowk area of Srinagar. 14 personnel injured in the attack. All the injured personnel evacuated to hospital. Area cordoned off. Further details shall follow: Kashmir Zone Police
(Visuals deferred by unspecified time) pic.twitter.com/IfEXEh3wii
— ANI (@ANI) December 13, 2021
ಸ್ಥಳೀಯ ಮೂಲಗಳ ಪ್ರಕಾರ, ದಾಳಿಯ ಹಿಂದೆ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ದಾಳಿಯಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಕೂಡ ಭಾಗಿಯಾಗಿರುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ.
J&K: Viral pictures from the spot of Srinagar terrorist attack emerge. Source of the pictures is unknown, however, confirmed by Police Sources.
One ASI & a Selection Grade Constable have succumbed to their injuries in the attack. pic.twitter.com/CHYimL95wD
— ANI (@ANI) December 13, 2021
ಪೊಲೀಸ್ ಬಸ್ ಮೇಲೆ ದಾಳಿ
ಪ್ರಸ್ತುತ ದಾಳಿ ನಡೆದ ಪ್ರದೇಶದಲ್ಲಿ ನಾಕಾಬಂದಿ ಮಾಡಲಾಗಿದ್ದು, ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಗೆ ಬಸ್ನ ಗಾಜುಗಳು ಒಡೆದಿದ್ದರಿಂದ ಭಯೋತ್ಪಾದಕರು ಘಟನೆ ನಡೆಸಿದ ಸ್ಥಳದಲ್ಲಿ ಗಾಜಿನ ಚೂರುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಪೊಲೀಸ್ ಬಸ್ ಮುಖ್ಯಕಚೇರಿ ಕಡೆಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ-Massive Fire Accident: ಹಿಮಾಚಲ ಪ್ರದೇಶದಲ್ಲಿ 27 ಮನೆ, 26 ಗೋಶಾಲೆಗಳು ಸುಟ್ಟು ಭಸ್ಮ..!
ಸ್ಥಳಕ್ಕೆ ಧಾವಿಸಿದ ಹಿರಿಯ ಅಧಿಕಾರಿಗಳು
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಪಂಥಾ ಚೌಕ್ ಪ್ರದೇಶದ ಜೆವಾನ್ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ. ದಾಳಿಯಲ್ಲಿ ಕನಿಷ್ಠ 14 ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿಸಿದರು. ಭಯೋತ್ಪಾದಕರನ್ನು ಬಂಧಿಸಲು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ-ಏನಿದು ಕಾಶಿ-ವಿಶ್ವನಾಥ ಕಾರಿಡಾರ್? ಪ್ರಧಾನಿ ಮೋದಿ ಕನಸಿನ ಯೋಜನೆ ಬಗ್ಗೆ ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ!
ಗಾಯಗೊಂಡಿರುವ ಯೋಧರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ, ಸಿಆರ್ಪಿಎಫ್ ಸ್ಕ್ವಾಡ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಕಣಿವೆಯಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸೇನೆಯಿಂದ ಹಿಡಿದು ಪೊಲೀಸ್ ಸಿಬ್ಬಂದಿಯವರೆಗೂ ದಾಳಿ ನಡೆಸಲಾಗುತ್ತಿದೆ. ಈ ಹಿಂದೆ ಬಿಎಸ್ಎಫ್ ಯೋಧರ ಮೇಲೂ ಉಗ್ರರ ದಾಳಿ ನಡೆಸಲಾಗಿತ್ತು ಎಂಬುದು ಇಲ್ಲಿ ಗಮನಾರ್ಹ.
ಇದನ್ನೂ ಓದಿ-Infringement Of Privacy:ಪತ್ನಿಯ ಕರೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡುವುದು "ಖಾಸಗಿತನದ ಉಲ್ಲಂಘನೆ"
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.