ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

Siddaramaiah Statement: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವುದು ಖಂಡನೀಯ. ಎಂಇಎಸ್ ನವರು ಪುಂಡರು.‌ ಅವರಿಗೆ ಕಾನೂನು ಇಲ್ಲ, ಏನೂ ಇಲ್ಲ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ. ಆಡಳಿತದ ಮೇಲೆ ಈ ಸರ್ಕಾರಕ್ಕೆ ಹಿಡಿತ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Edited by - Zee Kannada News Desk | Last Updated : Dec 20, 2021, 02:56 PM IST
  • ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವುದು ಖಂಡನೀಯ
  • ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ
  • ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ
ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ  title=
ಸಿದ್ದರಾಮಯ್ಯ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವುದು ಖಂಡನೀಯ. ಎಂಇಎಸ್ ನವರು ಪುಂಡರು.‌ ಅವರಿಗೆ ಕಾನೂನು ಇಲ್ಲ, ಏನೂ ಇಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ. ಆಡಳಿತದ ಮೇಲೆ ಈ ಸರ್ಕಾರಕ್ಕೆ ಹಿಡಿತ ಇಲ್ಲ. ಕಾನೂನು ಸುವ್ಯವಸ್ಥೆ  ಹದಗೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Opposition Leader Siddaramaiah) ಹೇಳಿದರು.

ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಸಭೆ:

ಸುವರ್ಣಸೌಧದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆ (Congress Meeting) ನಡೆಯಿತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಸಿದ್ದರಾಮಯ್ಯ ಜೊತೆ ಡಾ.ಜಿ.ಪರಮೇಶ್ವರ್, ಬಿ.ಕೆ.ಹರಿಪ್ರಸಾದ್, ರಮೇಶ್ ಕುಮಾರ್, ನಸೀರ್ ಅಹ್ಮದ್, ಸಿ.ಎಂ.ಇಬ್ರಾಹಿಂ, ನಾರಾಯಣಸ್ವಾಮಿ, ಪ್ರತಾಪಚಂದ್ರ ಶೆಟ್ಟಿ ಹಾಗೂ ಎಸ್.ಆರ್.ಪಾಟೀಲ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.

Congress Meeting

ಸಿದ್ದರಾಮಯ್ಯ ಟ್ವೀಟ್:

ಕರ್ನಾಟಕದ ನೆಲ, ಜಲ, ಭಾಷೆ, ಕಾನೂನನ್ನು ಗೌರವಿಸದ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದೆ. ಸದನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣ (Sangolli Rayanna) ಯಾವುದೇ ಒಂದು ಜಾತಿ, ಸಮಾಜಕ್ಕೆ ಸೀಮಿತವಾದವರಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಮಹಾನ್ ವ್ಯಕ್ತಿ. ಇಂಥವರ ಪ್ರತಿಮೆಯನ್ನು ವಿರೂಪಗೊಳಿಸೋದು ದೇಶ ದ್ರೋಹದ ಕೆಲಸವಾಗುತ್ತದೆ ಎಂದಿದ್ದಾರೆ.

 

 

ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ, ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಎಂ.ಇ.ಎಸ್ ನವರು ಮಾರಕಾಸ್ತ್ರಗಳೊಂದಿಗೆ ಬಂದು ದಾಂಧಲೆ ಮಾಡುತ್ತಾರೆ ಎಂದರೆ ಏನರ್ಥ?  ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ: ಕರುನಾಡಿಗೆ Omicron ಆಪತ್ತು: ಹೊಸ ವರ್ಷದ ಸಂಭ್ರಮಾಚರಣೆಗೆ ಬೀಳುತ್ತಾ ಬ್ರೇಕ್! ಜಾರಿಯಾಗುತ್ತಾ ನೈಟ್ ಕರ್ಫ್ಯೂ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News