ಚಿಕ್ಕಬಳ್ಳಾಪುರ: ಒಂದೆಡೆ ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ಭೀತಿ ಎದುರಾಗಿದ್ದರೆ, ಕೆಲವರಿಗೆ ನ್ಯೂ ಇಯರ್ ಪಾರ್ಟಿಯದ್ದೇ (New Year Party) ಚಿಂತೆ. ಆದರೆ ಹೀಗೆ ಹೊಸ ವರ್ಷಕ್ಕೆ ಭರ್ಜರಿ ಸಿದ್ಧತೆ ನಡೆಸಿದ್ದವರಿಗೆ ಶಾಕ್ ಮೇಲೆ ಶಾಕ್ ಸಿಗುತ್ತಿದ್ದು, ಇದೀಗ ಸುಪ್ರಸಿದ್ಧ ಪ್ರವಾಸಿ ಸ್ಥಳ ನಂದಿ ಹಿಲ್ಸ್ ಗೂ ಬೀಗ ಬಿದ್ದಿದೆ.
ಕೊರೊನಾ ರೂಪಾಂತರಿ ನಡುವೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಹೊಸ ವರ್ಷದಂದು ನಂದಿ ಗಿರಿಧಾಮದಲ್ಲಿ ಮೋಜು ಮಸ್ತಿಗೆ ಬ್ರೇಕ್ ಹಾಕಿದೆ. ನಂದಿ ಗಿರಿಧಾಮದಲ್ಲಿ (Nandi Hill Station) ಹೊಸ ವರ್ಷಾಚರಣೆ ನಿಷೇಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಪ್ರವಾಸಿಗರು, ಪ್ರೇಮಿಗಳಿಗೆ ಜಿಲ್ಲಾಡಳಿತ ಶಾಕ್ ಕೊಟ್ಟಿದೆ.
ಇದನ್ನೂ ಓದಿ- ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ವಿಧಾನಸಭೆ
ಡಿಸೆಂಬರ್ 30ರ ಸಂಜೆ 6ರಿಂದ ಜನವರಿ 2ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹಾಗೇ ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪಾರ್ಟಿ ಪ್ರಿಯರಿಗೆ ನಂದಿ ಹಿಲ್ಸ್ ಅತ್ಯಂತ ಪ್ರಿಯವಾದ ಸ್ಥಳ. ವಾರಾಂತ್ಯದಲ್ಲೇ ಕಿಕ್ಕಿರಿದು ತುಂಬಿ ಹೋಗುವ ನಂದಿ ಬೆಟ್ಟದಲ್ಲಿ ನ್ಯೂ ಇಯರ್ ಪಾರ್ಟಿ (New Year Party) ಭರ್ಜರಿಯಾಗಿ ನಡೆಯುತ್ತಿತ್ತು. ಆದರೆ ಈಗ ಎಲ್ಲದಕ್ಕೂ ಬ್ರೇಕ್ ಬಿದ್ದಿದೆ.
ಇದನ್ನೂ ಓದಿ- ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು- ಸಿದ್ಧರಾಮಯ್ಯ
ನಂದಿ ಗಿರಿಧಾಮದಲ್ಲಿ ನಿಷೇಧಾಜ್ಞೆ ಹೇರಿರುವ ಜಿಲ್ಲಾಡಳಿತ ಇದಕ್ಕೆ ಸ್ಪಷ್ಟನೆ ನೀಡಿದೆ. ಹೊಸವರ್ಷಾಚರಣೆಗೆ ಸಾವಿರಾರು ಜನ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಒಮಿಕ್ರಾನ್ (Omicron) ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ತಿಳಿಸಿದೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.