ಕೊರೊನಾ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಮಾಡಬಹುದು: ಕೃಷಿ ಸಚಿವ ಬಿ.ಸಿ.ಪಾಟೀಲ

Karnataka Lockdown:ಒಂದು ವೇಳೆ ಕೊರೊನಾ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಮಾಡಬಹುದು. ಆದರೆ ಲಾಕ್ ಡೌನ್ ಮಾಡುವ ಉದ್ದೇಶ ಸರಕಾರದ ಮುಂದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. 

Edited by - Zee Kannada News Desk | Last Updated : Jan 3, 2022, 05:23 PM IST
  • ಲಾಕ್ ಡೌನ್ ಮಾಡುವ ಉದ್ದೇಶ ಸರಕಾರಕ್ಕೆ ಇಲ್ಲ
  • ಜನರು ಮೈಮರೆತು ಓಡಾಡಬಾರದು
  • ಕೋವಿಡ್ ನಿಯಮಗಳನ್ನ ಪಾಲನೆ ಮಾಡಬೇಕು
  • ಲಾಕ್ ಡೌನ್ ಮಾಡುವ ಪರಿಸ್ಥಿತಿ ತರಬಾರದು
  • ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿಕೆ
ಕೊರೊನಾ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಮಾಡಬಹುದು: ಕೃಷಿ ಸಚಿವ ಬಿ.ಸಿ.ಪಾಟೀಲ  title=
ಕೃಷಿ ಸಚಿವ ಬಿ.ಸಿ.ಪಾಟೀಲ

ಹಾವೇರಿ: ಲಾಕ್ ಡೌನ್ (Lockdown) ಮಾಡುವ ಉದ್ದೇಶ ಸರಕಾರಕ್ಕೆ ಇಲ್ಲ. ಜನರು ಮೈಮರೆತು ಓಡಾಡಬಾರದು. ಕೋವಿಡ್ ನಿಯಮಗಳನ್ನ ಪಾಲನೆ ಮಾಡಬೇಕು. ಲಾಕ್ ಡೌನ್ ಮಾಡುವ ಪರಿಸ್ಥಿತಿ ತರಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ (Minister of Agriculture BC Patil) ಹೇಳಿದರು. 

ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಮಾನಾಡಿದ ಅವರು,  ಒಂದು ವೇಳೆ ಕೊರೊನಾ (Corona) ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಮಾಡಬಹುದು. ಆದರೆ ಲಾಕ್ ಡೌನ್ ಮಾಡುವ ಉದ್ದೇಶ ಸರಕಾರದ ಮುಂದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಮೇಕೆದಾಟು (Mekedatu) ವಿಚಾರವಾಗಿ ಕಾಂಗ್ರೆಸ್ ನಿಂದ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ನವರು ನಾಟಕ ಮಾಡ್ತಿದ್ದಾರೆ. ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದರು. 

ನಮ್ಮ ಸರಕಾರ ಯೋಜನೆ ಕಾರ್ಯಗತ ಮಾಡಲು ಬದ್ಧವಾಗಿದೆ ಅಂತಾ ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ನವರು ಹೋರಾಟ ಮಾಡ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನವರು ಇದನ್ನ ಮಾಡ್ತಿದ್ದಾರೆ. ಹಿಂದೆ ಡಿ.ಕೆ.ಶಿವಕುಮಾರ್ (DK Shivakumar) ನೀರಾವರಿ ಮಂತ್ರಿಗಳಾಗಿದ್ದರು. ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಆಗ ಯಾರೂ ಕೂಡ ಮೇಕೆದಾಟು ಬಗ್ಗೆ ಮಾತನಾಡಲಿಲ್ಲ. ಮೇಕೆದಾಟು ಕಾರ್ಯಗತ‌ ಮಾಡಲು ಮುಂದಾಗಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸಮ್ಮುಖದಲ್ಲೇ ಡಿ.ಕೆ.ಸುರೇಶ್ & ಅಶ್ವತ್ಥ್ ನಾರಾಯಣ್ ಫೈಟ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ. 
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News