ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 90,928 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ. ನಿನ್ನೆಯ 58,097 ಪ್ರಕರಣಗಳಿಗಿಂತ 56.5% ಹೆಚ್ಚಾಗಿದೆ.
ದೇಶವು 2,630 ಒಮಿಕ್ರಾನ್ ರೂಪಾಂತರದ ಪ್ರಕರಣಗಳನ್ನು ಹೊಂದಿದೆ. ಮಹಾರಾಷ್ಟ್ರದಲ್ಲಿ 797 ಪ್ರಕರಣಗಳಿದ್ದು ಮೊದಲ ಸ್ಥಾನದಲ್ಲಿದ್ದರೆ, ದೆಹಲಿಯು 465 ಪ್ರಕರಣಗಳೊಂದಿಗೆ ನಂತರದ ಸ್ಥಾನದಲ್ಲಿದೆ.
ಸಾಪ್ತಾಹಿಕ ಧನಾತ್ಮಕ ದರವು (The weekly positivity rate) 3.47 ಪ್ರತಿಶತ, ದೈನಂದಿನ ಧನಾತ್ಮಕತೆಯ ದರವು (daily positivity rate) 6.43 ಶೇಕಡಾ ಆಗಿದೆ. ಧನಾತ್ಮಕ ಪರೀಕ್ಷೆಗಳ ಸಂಖ್ಯೆ ಹೆಚ್ಚಿದ್ದರೆ ಅಥವಾ ಒಟ್ಟು ಪರೀಕ್ಷೆಗಳ ಸಂಖ್ಯೆ ಕಡಿಮೆಯಿದ್ದರೆ ಅದು ಅಧಿಕವಾಗಿರುತ್ತದೆ.
ಚೇತರಿಕೆಯ ಪ್ರಮಾಣವು (The recovery rate) ಪ್ರಸ್ತುತ ಶೇಕಡಾ 97.81 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 19,206 ಜನರು ಚೇತರಿಸಿಕೊಂಡಿದ್ದಾರೆ. ಈ ವರೆಗೆ ಒಟ್ಟು 3,43,41,009 ಜನ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ ಶೇಕಡಾ 1 ಕ್ಕಿಂತ ಕಡಿಮೆ ಇವೆ. ಪ್ರಸ್ತುತ ಶೇಕಡಾ 0.81 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,14,004 ಆಗಿದೆ.
ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಸುಮಾರು 325 ಜನರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಹಲವಾರು ರಾಜ್ಯಗಳು ರಾತ್ರಿ ಕರ್ಫ್ಯೂನಂತಹ (night curfew) ನಿರ್ಬಂಧಗಳನ್ನು ಘೋಷಿಸಿವೆ.
ಕಳೆದ ವರ್ಷ ಜನವರಿಯಲ್ಲಿ ಆರಂಭವಾದ ರಾಷ್ಟ್ರವ್ಯಾಪಿ ಲಸಿಕೆ (Corona Vaccine) ಅಭಿಯಾನದಡಿ ಇದುವರೆಗೆ 148.67 ಕೋಟಿ ಲಸಿಕೆ ಡೋಸ್ಗಳನ್ನು ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.