Mekedatu Project Dispute: ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆ

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ‘ಕೈ’ ನಾಯಕರು ಹಮ್ಮಿಕೊಂಡಿರುವ ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ವಿಭಾಗೀಯ ಪೀಠ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿದೆ.

Written by - Zee Kannada News Desk | Last Updated : Jan 12, 2022, 01:52 PM IST
  • ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ವಕೀಲ ಶ್ರೀಧರ್ ಪ್ರಭು ಪಿಐಎಲ್ ಸಲ್ಲಿಸಿದ್ದರು
  • ಹೈಕೋರ್ಟ್ ಮುಖ್ಯನಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದಿಂದ PIL ವಿಚಾರಣೆ
  • ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್ ನಾಯಕರಿಗೆ ಮತ್ತು ಬಿಜೆಪಿ ಸರ್ಕಾರಕ್ಕೆ ಹೈಕೊರ್ಟ್ ಛೀಮಾರಿ
Mekedatu Project Dispute: ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆ title=
ಕಾಂಗ್ರೆಸ್ ಮತ್ತು ಸರ್ಕಾರಕ್ಕೆ ಹೈಕೊರ್ಟ್ ಛೀಮಾರಿ

ಬೆಂಗಳೂರು: ಮೇಕೆದಾಟು ಯೋಜನೆ(Mekedatu Project Dispute) ಜಾರಿಗೆ ಒತ್ತಾಯಿಸಿ ‘ಕೈ’ ನಾಯಕರು ಹಮ್ಮಿಕೊಂಡಿರುವ ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ವಿಭಾಗೀಯ ಪೀಠ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿದೆ. ಪಾದಯಾತ್ರೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ಮುಖ್ಯನಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಕೋವಿಡ್ ಹೆಚ್ಚುತ್ತಿರುವ ವೇಳೆ ರ್ಯಾಲಿ ನಡೆಸಿದ್ದೀರಾ ? ರ್ಯಾಲಿಗೆ ಮುನ್ನ ನೀವು ಅನುಮತಿ ಪಡೆದಿದ್ದೀರಾ ? ಎಂದು ಕಾಂಗ್ರೆಸ್ ಗೆ ಹೈಕೋರ್ಟ್ ಪ್ರಶ್ನಿಸಿದೆ.

ರಾಜ್ಯದಲ್ಲಿ ನಿರಂತರವಾಗಿ ಕೋವಿಡ್(COVID-19) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಗೆ ಹೇಗೆ ಅನುಮತಿ ನೀಡಿದ್ದೀರಿ? ಎಂದು ರಾಜ್ಯ ಬಿಜೆಪಿ ಸರ್ಕಾರ(BJP Government)ಕ್ಕೆ ಹೈಕೋರ್ಟ್ ವಿಭಾಗೀಯ ಪೀಠವು ಪ್ರಶ್ನಿಸಿದ್ದು, ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: "ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ"- ಗೃಹ ಸಚಿವ ಆರಗ ಜ್ಞಾನೇಂದ್ರ

ಸರ್ಕಾರ ರ್ಯಾಲಿ ತಡೆಯಲು ಅಸಮರ್ಥವಾಗಿದೆಯೇ? ಅನುಮತಿ ಕೊಟ್ಟಿಲ್ಲದಿದ್ದರೆ ಯಾರಿಗಾಗಿ ಕಾಯುತ್ತಿದ್ದೀರಿ? ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಿದ್ದರೂ ಹೇಗೆ ಸುಮ್ಮನಿದ್ದೀರಿ? ಹೈಕೋರ್ಟ್ ಆದೇಶದವರೆಗೆ ನೀವು ಕ್ರಮ ಕೈಗೊಳ್ಳುವುದಿಲ್ಲವೇ? ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್(Karnataka High Court) ತರಾಟೆಗೆ ತೆಗೆದುಕೊಂಡು ಛಿಮಾರಿ ಹಾಕಿದೆ.

ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ(Mekedatu Padayatra) ವಿರುದ್ಧ ಹೈಕೋರ್ಟ್ ಗೆ ಪಿಐಎಲ್ ಕೋರಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆಗೆ ವಕೀಲ ಶ್ರೀಧರ್ ಪ್ರಭು ಮನವಿ ಮಾಡಿದ್ದರು. ಅರ್ಜಿಯಲ್ಲಿ ಕಾಂಗ್ರೆಸ್ (ಕೆಪಿಸಿಸಿ) ಪಾದಯಾತ್ರೆಯಿಂದ ಕೋವಿಡ್(CoronaVirus) ಹಬ್ಬಲಿದೆ. ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ.ಮಾಸ್ಕ್ ಇಲ್ಲದೇ ನಾಯಕರು ಮಕ್ಕಳನ್ನು ಭೇಟಿ ಮಾಡಿದ್ದಾರೆ. ಪಾದಯಾತ್ರೆ ಸೂಪರ್ ಸ್ಪ್ರೆಡ್ಡರ್ ಆಗುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಹೈಕೋರ್ಟ್ ಗೆ ಉತ್ತರಿಸಲು ನಾಳೆವರೆಗೆ(ಜ.13) ಕಾಲಾವಕಾಶ ನೀಡಿರುವ ಹೈಕೋರ್ಟ್ ವಿಚಾರಣೆಯನ್ನು ಜ.14 ಕ್ಕೆ ಮುಂದೂಡಿದೆ. ಈಗಾಗಲೇ ಪಾದಯಾತ್ರೆ ನಡೆಸುವವರ ಮೇಲೆ 3 ಎಫ್ಐಆರ್(FIR) ದಾಖಲಿಸಿರುವುದಾಗಿ ಎಎಜಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಸ್ಟೋನ್ ‌ಕ್ರಷರ್ ನಲ್ಲಿ ಬ್ಲಾಸ್ಟ್.. ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ತಗುಲಿದ ಕಲ್ಲು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News