ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ: ಸಂದರ್ಶನಕ್ಕೆ ಆಹ್ವಾನ

ಕೊಪ್ಪಳ ತಾಲ್ಲೂಕಿನ  ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಜ್ ಪ್ರೈ. ಲಿ. ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆ.07 ರಂದು ಒಂದು ವರ್ಷದ ಅವಧಿಯ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ.

Last Updated : Feb 4, 2022, 04:45 PM IST
  • ಕೊಪ್ಪಳ ತಾಲ್ಲೂಕಿನ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಜ್ ಪ್ರೈ. ಲಿ.ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆ.07 ರಂದು ಒಂದು ವರ್ಷದ ಅವಧಿಯ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ: ಸಂದರ್ಶನಕ್ಕೆ ಆಹ್ವಾನ title=

ಬೆಂಗಳೂರು: ಕೊಪ್ಪಳ ತಾಲ್ಲೂಕಿನ  ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಜ್ ಪ್ರೈ. ಲಿ. ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆ.07 ರಂದು ಒಂದು ವರ್ಷದ ಅವಧಿಯ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ.

ಇದನ್ನೂ ಓದಿ: 7th Pay Commission : ಕೇಂದ್ರ ನೌಕರರಿಗೆ ಕಾದಿದೆ ಅದೃಷ್ಟ : DA ಹೆಚ್ಚಳದ ಜೊತೆ ಸಿಗಲಿದೆ ₹2,32,152 - ಲೆಕ್ಕಾಚಾರ ನೋಡಿ

ಅಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ಆರಂಭವಾಗಲಿದ್ದು, 18 ರಿಂದ 24 ವರ್ಷ ವಯೋಮಿತಿಯ ಐಟಿಐ ಎಲೆಕ್ತ್ರಿಷಿಯನ್, ಫಿಟ್ಟರ್, ಟರ್ನರ್ ಮತ್ತು ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾಗಿರುವ ಹಾಗೂ ಡಿಸೆಂಬರ್-2021ರಲ್ಲಿ ನಡೆದ ಪರೀಕ್ಷೆಗಳ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಂತಿಮ ವರ್ಷದ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಇದನ್ನೂ ಓದಿ: ಪಟ್ಟದಕಲ್ಲು-ಶಿರೂರು ಹೆದ್ದಾರಿ ವಿಸ್ತರಣೆಗೆ 264.15 ಕೋಟಿ ಮಂಜೂರು: ಗಡ್ಕರಿಗೆ ಸಿಎಂ ಧನ್ಯವಾದ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಸಮಯದಲ್ಲಿ ಪ್ರತಿ ತಿಂಗಳು ರೂ.10,000/- ಶಿಷ್ಯವೇತನ, ಕ್ಯಾಂಟೀನ್, ಸಾರಿಗೆ, ಮತ್ತು ಯುನಿಫಾರ್ಮ್ ಸೌಲಭ್ಯಗಳನ್ನು ಕಂಪನಿಯಿಂದ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹತ್ತನೇ ತರಗತಿ ಅಂಕಪಟ್ಟಿ, ಐಟಿಐ ಪಾಸಾದ ಅಂಕಪಟ್ಟಿಗಳು, ಆಧಾರ ಕಾರ್ಡ್, ಜಾತಿ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಬುಕ್ ಮತ್ತು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಇದನ್ನೂ ಓದಿ: ಪಟ್ಟದಕಲ್ಲು-ಶಿರೂರು ಹೆದ್ದಾರಿ ವಿಸ್ತರಣೆಗೆ 264.15 ಕೋಟಿ ಮಂಜೂರು: ಗಡ್ಕರಿಗೆ ಸಿಎಂ ಧನ್ಯವಾದ

ಹೆಚ್ಚಿನ ಮಾಹಿತಿಗಾಗಿ ಮೊ.ಸಂ  9480715898, 9449517426, 9964247098, 8618952961 ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ  ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News