ಬೆಂಗಳೂರು: ಕಾಂಗ್ರೆಸ್-ಮತ್ತು ಜೆಡಿಎಸ್ ನ ಅಪವಿತ್ರ ಮೈತ್ರಿ ಕನಿಷ್ಠ ಮೂರು ತಿಂಗಳು ಸಹಿತ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದಾರೆ.
ಇಂದು ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ದ ಟೀಕಾ ಪ್ರಹಾರ ನಡೆಸಿದ ಯಡಿಯೂರಪ್ಪ" ಅಧಿಕಾರದ ದಾಹವೊಂದೇ ಜೆಡಿಎಸ್ ಮತ್ತು ಕಾಂಗ್ರೆಸ್ ನ ಮೂಲ ತಳಹದಿ ಅಂತಹ ಮೈತ್ರಿ ಮೂರು ತಿಂಗಳು ಸಹಿತ ಇರುವುದಿಲ್ಲ ಎಂದು ತಿಳಿಸಿದರು.
ಇಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ " ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಜನರ ತೀರ್ಪನ್ನು ಹೈಜಾಕ್ ಮಾಡಿವೆ.ಆದ್ದರಿಂದ ಇದನ್ನು ಇಂದಿನ ಸಮಾರಂಭದ ನಿಮಿತ್ತ ಬಿಜೆಪಿಯು ಕರಾಳ ದಿನಾಚರಣೆಯನ್ನಾಗಿ ಆಚರಿಸಲು ತೀರ್ಮಾನ ಮಾಡಿದೆ ಎಂದು ತಿಳಿಸಿದರು.
ಇಂದು ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೇಶದ ಎಲ್ಲ ಪ್ರಾದೇಶಿಕ ಪಕ್ಷದ ನಾಯಕರು ಮುಖ್ಯಮಂತ್ರಿಗಳು ಸಾಕ್ಷಿಯಾದರು. ಆ ಮೂಲಕ ಮುಂಬರುವ 2019ರ ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಮೋದಿ ಸರ್ಕಾರದ ಒಗ್ಗಟ್ಟಿನ ಶಕ್ತಿ ಮಂತ್ರವನ್ನು ಕಾರ್ಯಕ್ರಮದ ಮೂಲಕ ಸಾಬೀತುಪಡಿಸಿದ್ದಾರೆ.