Kisan Drone - ಕೇಂದ್ರದ ಮೋದಿ ಸರಕಾರ (PM Modi Government) ರೈತರ ನೆರವಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತಿದೆ. ಇದೇ ವೇಳೆ ರೈತರಿಗೆ ನೆರವಾಗುವ ಉದ್ದೇಶದಿಂದ ವಿಶೇಷ ಅಭಿಯಾನ ಆರಂಭಿಸಲಾಗಿದೆ. ಇದರ ಅಡಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಕ್ರವಾರ 100 ರೈತ ಡ್ರೋನ್ಗಳಿಗೆ ಭಾರತದ ವಿವಿಧ ನಗರಗಳು ಮತ್ತು ಪಟ್ಟಣಗಳ ಹೊಲಗಳಲ್ಲಿ ಕೀಟನಾಶಕಗಳನ್ನು (Pesticides Spraying) ಸಿಂಪಡಿಸಲು ಹಸಿರು ನಿಶಾನೆ ತೋರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, "ಇದು 21ನೇ ಶತಮಾನದ ಆಧುನಿಕ ಕೃಷಿಯತ್ತ ಒಂದು ಹೊಸ ಅಧ್ಯಾಯವಾಗಿದೆ. ನಮ್ಮ ಈ ಆರಂಭ ಕೇವಲ ಡ್ರೋನ್ ಕ್ಷ್ಟೇತ್ರದ ಅಭಿವೃದ್ಧಿಯಲ್ಲಿ ಮೈಲಿಗಲ್ಲು ಸಾಬೀತಾಗುವುದರ ಜೊತೆಗೆ ಅನಿಯಮಿತ ಸಾಧನೆಗಳಿಗೆ ಅವಕಾಹಗಳನ್ನು ತೆರೆಯಲಿದೆ ಎಂಬ ವಿಶ್ವಾಸ ತಮಗಿದೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ -Toolsidas Junior Trailer Release:Rajeev Kapoor ನಟಿಸಿರುವ ಕೊನೆಯ ಚಿತ್ರದ ಟ್ರೈಲರ್ ಬಿಡುಗಡೆ
ಗಮನಾರ್ಹವಾಗಿ, 2022-23 ರ ಬಜೆಟ್ನ ಘೋಷಣೆಯ ಸಮಯದಲ್ಲಿ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ (FM Nirmala Sitharaman) ಅವರು ಕೃಷಿ ಮತ್ತು ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನವನ್ನು ಘೋಷಿಸಿದ್ದರು. ಬಜೆಟ್ನ ವಿವರಗಳನ್ನು ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 2022-23 ರ ಆರ್ಥಿಕ ವರ್ಷದಲ್ಲಿ ದೇಶಾದ್ಯಂತ ರೈತರಿಗೆ ಡಿಜಿಟಲ್ ಮತ್ತು ಹೈಟೆಕ್ ಸೇವೆಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರ ಚರ್ಚೆ ನಡೆಸಿದೆ ಎಂದು ಅವರು ಹೇಳಿದ್ದರು.
ಡ್ರೋನ್ಗಳು, ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ, ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ರೈತರಿಗೆ ಉತ್ತೇಜಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಂತ್ರಜ್ಞಾನದ ಬಳಕೆಗೆ ಒತ್ತು ನೀಡಿದ ಅವರು, ಬೆಳೆ ಮೌಲ್ಯಮಾಪನ, ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಕೀಟನಾಶಕ ಮತ್ತು ಪೋಷಕಾಂಶಗಳ ಸಿಂಪರಣೆಗಾಗಿ ರೈತ ಡ್ರೋನ್ಗಳನ್ನು ಉತ್ತೇಜಿಸಲಾಗುವುದು ಎಂದು ಅವರು ಹೇಳಿದ್ದರು. ಇಂತಹ ಪರಿಸ್ಥಿತಿಯಲ್ಲಿ ಇದೀಗ ಪಿಎಂ ಮೋದಿಯವರು ಡ್ರೋನ್ಗಳ ಮೂಲಕ ರಾಸಾಯನಿಕಗಳನ್ನು ಸಿಂಪಡನೆಗೆ ಅನುಮೋದನೆ ನೀಡಿರುವುದು ಈ ನಿಟ್ಟಿನಲ್ಲಿ ಒಂದು ದೊಡ್ಡ ಹೆಜ್ಜೆ ಎಂದೇ ಸೂಚಿಸುತ್ತದೆ.
ಇದನ್ನೂ ಓದಿ-business ideas: ಸರ್ಕಾರದ ನೆರವಿನಿಂದ ಈ ಉದ್ಯಮ ಆರಂಭಿಸಿ, 6 ಲಕ್ಷ ರೂ.ಗಳ ನಿವ್ವಳ ಲಾಭಾಂಶ ಪಡೆಯಿರಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.