ಬೆಂಗಳೂರು: ನಿವೇಶನ ಕಬಳಿಸಿರುವ ವಿಚಾರವಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಕುಟುಂಬಸ್ಥರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: "ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿರುವುದು ಅಸಹ್ಯ ರಾಜಕಾರಣದ ಪರಮಾವಧಿ"
ಶಾಹೀತಾ ನಾಜೀನ್ ಎಂಬುವರು ಶಾಸಕ ಜಮೀರ್ ಅಹಮದ್ ಹಾಗೂ ಅವರ ಸಹೋದರ ಜಮೀಲ್ ಅಹಮದ್ ತಮಗೆ ಮಾರಾಟ ಮಾಡಲಾಗಿದ್ದ ನಿವೇಶನಗಳನ್ನು ಕಬಳಿಸಲು ಯತ್ನಿಸಿದ್ದರು.ಪ್ರಶ್ನಿಸಿದರೆ ಅವರ ಕಡೆಯವರು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಇದೇ ವೇಳೆ ವಾದ-ಪ್ರತಿವಾದ ಆಲಿಸಿದ 7 ನೇ ಎಸಿಎಂಎ ನ್ಯಾಯಾಲಯ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸರಿಗೆ ನಿರ್ದೇಶನ ನೀಡಿದ ಮೇರೆಗೆ ಈಗ ಅವರು ಶಾಸಕ ಜಮೀರ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು?: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
2015 ರಲ್ಲಿ ಚೊಕ್ಕನಹಳ್ಳಿ ಬಡಾವಣೆಯಲ್ಲಿರುವ ನಿವೇಶನವನ್ನ ಜೆ.ಸಿ.ನಗರ ನಿವಾಸಿ ಶಾಹೀತಾ ನಾಜೀನ್ ಎಂಬುವರು ಜಮೀರ್ ಕುಟುಂಬಸ್ಥರಿಂದ ಖರೀದಿ ಮಾಡಿದ್ದರು. 2018 ರಲ್ಲಿ ಜಮೀರ್ ಕುಟುಂಬಸ್ಥರಿಂದಲೇ ಮತ್ತೊಂದು ಸೈಟ್ ಖರೀದಿಸಿದ್ದರು.ನಿವೇಶನ ಖರೀದಿಸಿ ಕೆಲವರ್ಷಗಳಾದರೂ ಸೈಟ್ ಗಳ ಕಡೆ ಗಮನ ಹರಿಸಿರಲಿಲ್ಲ.ಈ ಮಧ್ಯೆ ಮಾರಾಟ ಮಾಡಿದ್ದ ಜಮೀರ್ ಕುಟುಂಬದಿಂದಲೇ ಸೈಟ್ ಗಳನ್ನು ಕಬಳಿಸಲು ಯತ್ನಿಸಿದ್ದಾರೆ.ಇದನ್ನು ಪ್ರಶ್ನಿಸಿದ್ದ ಶಾಹೀತಾ ನಾಜೀನ್ ಕುಟುಂಬಕ್ಕೆ ಶಾಸಕರ ಬೆಂಬಲಿಗರಿಂದ ಜೀವಬೆದರಿಕೆ ಹಾಕಿದ್ದರು ಎಂದು ಶಾಹೀತಾ ಆರೋಪಿಸಿದ್ದರು.ಸದ್ಯ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.