Russia-Ukraine Tension - ಉಕ್ರೇನ್ ಮೇಲಿನ ರಷ್ಯಾದ ದಾಳಿಯ ನೇರ ಪರಿಣಾಮ ಭಾರತದ ಮೇಲೂ ಕಾಣಿಸತೊಡಗಿದೆ. ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ (Indian Student Death In Ukraine) ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯನ್ನು ಕರ್ನಾಟಕದ (Karnataka Student) ನವೀನ್ (Naveen) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಕ್ರೇನ್ ಮತ್ತು ರಷ್ಯಾ ರಾಯಭಾರಿಗಳಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿದೆ.
ರಷ್ಯಾ (Russia) ಮತ್ತು ಉಕ್ರೇನ್ (Ukraine) ರಾಯಭಾರಿಗಳಿಗೆ ಬುಲಾವ್
ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi), ವಿದೇಶಾಂಗ ಕಾರ್ಯದರ್ಶಿ ಹರ್ಷ್ ಶ್ರಿಂಗ್ಲಾ (Harsh Shringla) ಅವರು ರಷ್ಯಾ ಮತ್ತು ಉಕ್ರೇನ್ ರಾಯಭಾರಿಗಳಿಗೆ ಕರೆ ಮಾಡಿ ಖಾರ್ಕಿವ್ನಲ್ಲಿರುವ ಭಾರತೀಯ ಪ್ರಜೆಗಳು ಮತ್ತು ಇತರ ಸಂಘರ್ಷ ವಲಯಗಳಲ್ಲಿರುವರನ್ನು ತಕ್ಷಣವೇ ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸುವಂತೆ ಪುನರುಚ್ಚರಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ನಲ್ಲಿಯೂ ನಮ್ಮ ರಾಯಭಾರಿಗಳು ಇದೇ ರೀತಿಯ ಕ್ರಮವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ನವೀನ್ ಕುರಿತು ಟ್ವೀಟ್ ಮಾಡಿರುವ ಬಾಗ್ಚಿ, 'ಇಂದು ಬೆಳಗ್ಗೆ ಖಾರ್ಕಿವ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾವು ಬಹಳ ದುಃಖದಿಂದ ದೃಢೀಕರಿಸುತ್ತೇವೆ. ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಚಿವಾಲಯ ಸಂಪರ್ಕದಲ್ಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-Air India News: Air India ಗೆ Ilker Ayci ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬರುತ್ತಿಲ್ಲ! ಕಾರಣ ಇಲ್ಲಿದೆ
ಭಾರತೀಯ ನಾಗರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ
ಖಾರ್ಕಿವ್ನಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಖಾರ್ಕಿವ್ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಉಕ್ರೇನ್ನಲ್ಲಿ ಸಿಕ್ಕಿಬಿದ್ದಿರುವ ನಮ್ಮ ನಾಗರಿಕರ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ-ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಅನ್ನೇ ಏಕೆ ಆಯ್ಕೆ ಮಾಡುತ್ತಾರೆ?
ಖಾರ್ಕಿವ್ ಮತ್ತು ಸಂಘರ್ಷ ವಲಯದಲ್ಲಿರುವ ನಗರಗಳಿಂದ ಬರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳಿಗೆ ಸುರಕ್ಷಿತ ಮಾರ್ಗದ ಅಗತ್ಯವನ್ನು ನಾವು ಈಗಾಗಲೇ ರಷ್ಯಾ ಮತ್ತು ಉಕ್ರೇನಿಯನ್ ರಾಯಭಾರ ಕಚೇರಿಗಳೊಂದಿಗೆ ಚರ್ಚಿಸಿದ್ದೇವೆ ಎಂದು ಸಚಿವಾಲಯ ಹೇಳಿದೆ. 9000ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ಉಕ್ರೇನ್ನಿಂದ ಹೊರಗೆ ಕರೆತರಲಾಗಿದ್ದು, ಇವರಲ್ಲಿ ಬಹುತೇಕರು ಸುರಕ್ಷಿತ ಕ್ಷೇತ್ರಗಳಲ್ಲಿದ್ದಾರೆ. ಹೀಗಿರುವಾಗ ಅಗತ್ಯತೆಗೆ ಅನುಗುಣವಾಗಿ ರಷ್ಯಾ ಹಾಗೂ ಉಕ್ರೇನ್ ಗಳು ಸುರಕ್ಷಿತ ಮಾರ್ಗಗಳ ಕುರಿತು ತಕ್ಷಣ ಪ್ರತಿಕ್ರಯೆ ನೀಡಬೇಕು ಎಂದು ಸಚಿವಾಲಯ ಹೇಳಿದೆ.
ಇದನ್ನೂ ಓದಿ-Russia Ukraine war : ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.