'ಕಾಂಗ್ರೆಸ್ ಯಾಕೆ ಚಿಂತಾಕ್ರಾಂತವಾಗಿದೆ? ಅವರ ಅಭ್ಯರ್ಥಿಗಳ ಮೇಲೆ ನಂಬಿಕೆ ಇಲ್ವಾ..?'

ಗೋವಾ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಒಂದು ದಿನ ಮೊದಲು, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ಅದು ತನ್ನ ಅಭ್ಯರ್ಥಿಗಳ ಮೇಲೆ ನಂಬಿಕೆ ಇಲ್ಲವೇ? ಎಂದು ಅವರು ಪ್ರಶ್ನಿಸಿದರು.

Written by - Zee Kannada News Desk | Last Updated : Mar 9, 2022, 07:40 PM IST
  • ಜೀ ನ್ಯೂಸ್ ಸಮೀಕ್ಷೆ ಪ್ರಕಾರ 2022 ರಲ್ಲಿ ಗೋವಾದಲ್ಲಿ ಸರ್ಕಾರ ಬದಲಾವಣೆಯಾಗುವ ಸಾಧ್ಯತೆಯಿದೆ,
  • ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಬರಲಿದೆ.
  • ಅದು ತನ್ನ ಮೈತ್ರಿಕೂಟದ ಮೂಲಕ ಶೇ.33 ರಷ್ಟು ಮತಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.
'ಕಾಂಗ್ರೆಸ್ ಯಾಕೆ ಚಿಂತಾಕ್ರಾಂತವಾಗಿದೆ? ಅವರ ಅಭ್ಯರ್ಥಿಗಳ ಮೇಲೆ ನಂಬಿಕೆ ಇಲ್ವಾ..?' title=
Photo Courtesy: ANI

ನವದೆಹಲಿ: ಗೋವಾ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಒಂದು ದಿನ ಮೊದಲು, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ಅದು ತನ್ನ ಅಭ್ಯರ್ಥಿಗಳ ಮೇಲೆ ನಂಬಿಕೆ ಇಲ್ಲವೇ? ಎಂದು ಅವರು ಪ್ರಶ್ನಿಸಿದರು.

ಹಲವು ಚುನಾವಣಾ ಸಮೀಕ್ಷೆಗಳು ಗೋವಾ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದಿರುವ ಬೆನ್ನಲ್ಲೇ ಪ್ರಮೋದ್ ಸಾವಂತ್ (Pramod Sawant) ಅವರ ಹೇಳಿಕೆ ಬಂದಿದೆ.“ಫಲಿತಾಂಶ ನಾಳೆ ಇದೆ, ಆದರೆ ಕಾಂಗ್ರೆಸ್ ಯಾಕೆ ಚಿಂತಾಕ್ರಾಂತವಾಗಿದೆ ಎನ್ನುವುದು ತಿಳಿದಿಲ್ಲ, ಅವರು ತಮ್ಮ ಅಭ್ಯರ್ಥಿಗಳನ್ನು ನಂಬುವುದಿಲ್ಲವೇ? ಯಾರು ಗೆಲ್ಲುತ್ತಾರೆ ಎಂದು ತಿಳಿಯದೆ ಅಭ್ಯರ್ಥಿಗಳನ್ನು ಅವರು ಪ್ರತ್ಯೇಕವಾಗಿ ಮತ್ತು ಒತ್ತಡದಲ್ಲಿ ಇರಿಸುತ್ತಿದ್ದಾರೆ.ಆದರೆ ಇದೆಲ್ಲದರ ನಡುವೆ ಬಿಜೆಪಿ ಮಾತ್ರ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: 7th Pay Commission : ಕೇಂದ್ರ ನೌಕರರಿಗೆ ಸಿಹಿ ಸುದ್ದಿ : ನಿಮ್ಮ ವೇತನದಲ್ಲಿ ₹20,484 ಏರಿಕೆ, ಮಾರ್ಚ್ 16 ರಂದು ಪ್ರಕಟ!

40 ಸದಸ್ಯರ ಸದನದಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಕೂಡ ಸರ್ಕಾರ ರಚಿಸುವಲ್ಲಿ ಕಾಂಗ್ರೆಸ್ ವಿಫಲವಾಗಿತ್ತು, ಅದರಲ್ಲಿ ಬಹುತೇಕರು ಪಕ್ಷಾಂತರಗೊಂಡಿದ್ದರಿಂದಾಗಿ ಕೊನೆಗೆ ಇಬ್ಬರೇ ಶಾಸಕರು ಉಳಿದಿದ್ದರು.ಅಂತಿಮವಾಗಿ ಗೋವಾದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿತ್ತು.

ಪಿಟಿಐ ವರದಿ ಪ್ರಕಾರ, 2022 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳನ್ನು ಮಾರ್ಚ್ 10 ರಂದು ಫಲಿತಾಂಶಕ್ಕೆ ಮುಂಚಿತವಾಗಿ ಕಾಂಗ್ರೆಸ್ (Congress) ಪಣಜಿ ಬಳಿಯ ಬಾಂಬೋಲಿಮ್ ಗ್ರಾಮದ ಐಷಾರಾಮಿ ರೆಸಾರ್ಟ್‌ಗೆ ಸ್ಥಳಾಂತರಿಸಿದೆ.ಕೆಲವು ಅಭ್ಯರ್ಥಿಗಳಿಗೆ ಗುರುವಾರ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಲು ಪಕ್ಷವು ಅವಕಾಶ ನೀಡುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Ministry of Labour : ಸರ್ಕಾರದ ಈ ಯೋಜನೆ ಮೂಲಕ ಕಾರ್ಮಿಕರಿಗೆ ಸಿಗಲಿದೆ ₹3000 : ಅದಕ್ಕೆ ಈ ಕೆಲಸ ಮಾಡಿ

ಆದರೆ, ಬಿಜೆಪಿ ನೇತೃತ್ವದ ಗೋವಾ ಸರ್ಕಾರವನ್ನು ತೊರೆದು ಕಾಂಗ್ರೆಸ್ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿರುವ ಮೈಕೆಲ್ ಲೋಬೋ, ಎಲ್ಲಾ ಅಭ್ಯರ್ಥಿಗಳು ಮತ ಎಣಿಕೆ ಕೇಂದ್ರಕ್ಕೆ ಹೋಗಲಿದ್ದಾರೆ ಎಂದು ಹೇಳಿದರು.

ಜೀ ನ್ಯೂಸ್ ಸಮೀಕ್ಷೆ ಪ್ರಕಾರ 2022 ರಲ್ಲಿ ಗೋವಾದಲ್ಲಿ ಸರ್ಕಾರ ಬದಲಾವಣೆಯಾಗುವ ಸಾಧ್ಯತೆಯಿದೆ, ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಬರಲಿದೆ.ಅದು ತನ್ನ ಮೈತ್ರಿಕೂಟದ ಮೂಲಕ ಶೇ.33 ರಷ್ಟು ಮತಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.ಶೇ 31 ರಷ್ಟು ಮತಗಳನ್ನು ಗಳಿಸುವ ಮೂಲಕ ಬಿಜೆಪಿಯು ಎರಡನೇ ಸ್ಥಾನಕ್ಕೆ ತೃಪ್ತಿಪಡಲಿದೆ ಎಂದು ಸಮೀಕ್ಷೆ ಹೇಳಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News