Punjab Election Result 2022: ಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಆಮ್ ಆದ್ಮಿ ಪಕ್ಷ ಗೆಲುವಿನ ವಿಶ್ವಾಸದಲ್ಲಿದೆ. ಫಲಿತಾಂಶ ಹೊರಬೀಳುವ ಮುನ್ನವೇ ಪಕ್ಷದ ರಾಷ್ಟ್ರೀಯ ಕಚೇರಿಯ ಹೊರಗೆ ಧನ್ಯವಾದ ಎಂಬ ಬ್ಯಾನರ್ ಹಾಕಲಾಗಿದೆ.
ಪಕ್ಷದ ಕಚೇರಿಯ ಹೊರಗಿನ ಬ್ಯಾನರ್:
ಪಂಜಾಬ್ ಚುನಾವಣೆಯ (Punjab Election) ಎಕ್ಸಿಟ್ ಪೋಲ್ಗಳಲ್ಲಿ ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಪಂಜಾಬ್ ರಾಜ್ಯದಲ್ಲಿ ಗೆಲುವಿನ ನಗೆ ಬೀರಲಿದೆ ಎಂದು ತಿಳಿಸಿವೆ. ಇದರ ನಂತರ, ಪಕ್ಷವು ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸವನ್ನು ತೋರುತ್ತಿದೆ. ಪಕ್ಷದ ಕಚೇರಿಯ ಹೊರಗೆ ಭಗವಂತ್ ಮಾನ್ ಅವರ ಚಿತ್ರವಿರುವ ಧನ್ಯವಾದಗಳ ಬ್ಯಾನರ್ ಹಾಕಲಾಗಿದೆ. ಆದರೆ, ಅದನ್ನು ಇನ್ನೂ ಬಿಳಿ ಬಟ್ಟೆಯಿಂದ ಮುಚ್ಚಲಾಗಿದೆ. ಇದಲ್ಲದೇ ಕಚೇರಿಯ ಒಳಗೆ ಹೂ, ಬಲೂನ್ಗಳಿಂದ ಅಲಂಕರಿಸಲಾಗಿದ್ದು ಗೆಲುವಿನ ಸಂಭ್ರಮಾಚರಣೆಗೆ ಸಿದ್ಧತೆಗಳು ಭರ್ಜರಿಯಾಗಿ ಜರುಗಿದೆ.
Punjab | Jalebis being prepared, flower decoration being done at the residence of Aam Aadmi Party CM candidate Bhagwant Mann, at Sangrur pic.twitter.com/xTlEzV1a9u
— ANI (@ANI) March 10, 2022
ಇದನ್ನೂ ಓದಿ- ECI ವೆಬ್ಸೈಟ್ ಮತ್ತು ಮತದಾರರ ಸಹಾಯವಾಣಿಯಲ್ಲಿ ಈ ರೀತಿ ಎಲೆಕ್ಷನ್ ರಿಸಲ್ಟ್ ಪರಿಶೀಲಿಸಿ
ಫಲಿತಾಂಶಕ್ಕೂ ಮುನ್ನ ತಯಾರಾಗುತ್ತಿದೆ ಜಲೇಬಿ :
ಇದರೊಂದಿಗೆ ಸಂಗ್ರೂರಿನ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಭಗವಂತ್ ಮಾನ್ (Bhagwant Mann) ಅವರ ನಿವಾಸವನ್ನು ಹೂವುಗಳಿಂದ ಅಲಂಕರಿಸಲಾಗುತ್ತಿದೆ. ಬೆಳಗ್ಗೆಯಿಂದಲೇ ಅಲ್ಲಿ ಜಿಲೇಬಿ ತಯಾರಿ ಕೂಡ ನಡೆಯುತ್ತಿದೆ.
ಇದನ್ನೂ ಓದಿ- ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಉತ್ತರ ಪ್ರದೇಶದಲ್ಲಿ ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ?
1304 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ:
ಇಂದು ಬೆಳಗ್ಗೆ 8 ಗಂಟೆಯಿಂದ ಪಂಜಾಬ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂಬುದು ಗಮನಾರ್ಹ. ಪಂಜಾಬ್ನ ಒಟ್ಟು 117 ವಿಧಾನಸಭಾ ಸ್ಥಾನಗಳಲ್ಲಿ ಹಲವು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಫೆಬ್ರವರಿ 20 ರಂದು ಪಂಜಾಬ್ನಲ್ಲಿ ಮತದಾನ ನಡೆದಿತ್ತು. ಚುನಾವಣೆಯಲ್ಲಿ ಒಟ್ಟು 1304 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಈ ಪೈಕಿ 1209 ಪುರುಷರು ಮತ್ತು 93 ಮಹಿಳಾ ಅಭ್ಯರ್ಥಿಗಳು. ಇಬ್ಬರು ಟ್ರಾನ್ಸ್ಜೆಂಡರ್ ಅಭ್ಯರ್ಥಿಗಳು ಇದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.